'ಮಾನಸಿಕ ಅಸ್ವಸ್ಥರಿಗೂ ಅವಕಾಶ ನೀಡಿ'
ಟಿ. ನರಸೀಪುರ: ಮಾನಸಿಕ ಅಸ್ವಸ್ಥರನ್ನು ಕಡೆಗಣಿಸಿ, ಅವರಿಗಿರುವ ಮೂಲ ಹಕ್ಕುಗಳನ್ನು ಕಸಿದುಕೊಳ್ಳದೆ ಬದಕಲು ಸಮಾನ ಅವಕಾಶವನ್ನು ಕಲ್ಪಿಸಿಕೊಡಬೇಕೆಂದು ಹಿರಿಯ ಶ್ರೇಣಿ ನ್ಯಾಯಾಧೀಶ ಸಿ. ಚಂದ್ರಶೇಖರ ಹೇಳಿದರು.
ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹುಟ್ಟಿನಿಂದಲೆ ಯಾವೊಬ್ಬ ವ್ಯಕ್ತಿಯು ಮಾನಸಿಕ ಖಿನ್ನತೆಯಿಂದ ಬಳಲುವುದಿಲ್ಲ. ಸಾಮಾಜಿಕ ವ್ಯವಸ್ಥೆಯಲ್ಲಿ ಒತ್ತಡಕ್ಕೊಳಗಾಗಿ ಅಥವಾ ಪರಿಸ್ಥಿತಿಗನುಗುಣವಾಗಿ ಮಾನಸಿಕವಾಗಿ ದುರ್ಬಲಕ್ಕೊಳಗಾಗುತ್ತಾರೆ ಎಂದು ತಿಳಿಸಿದರು.
ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಗೋವಿಂದಶೆಟ್ಟಿ ಮಾತನಾಡಿದರು. ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಕಾನೂನು ಸಾಕ್ಷರತಾ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಿರಿಯ ಶ್ರೇಣಿ ನ್ಯಾಯಾಧೀಶ ಬಿ.ಜಿ. ದಿನೇಶ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಮಂಜುನಾಥ್, ವೈದ್ಯ ಡಾ. ರವಿಕುಮಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರಾಜಣ್ಣ, ಆರೋಗ್ಯ ನಿರೀಕ್ಷಕ ಮಹದೇವಯ್ಯ, ಸಹಾಯಕ ಸರ್ಕಾರಿ ಅಭಿಯೋಜಕಿ ಜಯಶ್ರೀ ಶೆಣೈ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

