ಮೈಸೂರು

ತಾಪಂ ಪ್ರಭಾರ ಅಧ್ಯಕ್ಷರಾಗಿ ಶಕುಂತಲಾ ರಮೇಶ್

Published On :

ಕೆ.ಆರ್. ನಗರ: ತಾಪಂ ಉಪಾಧ್ಯಕ್ಷೆ ಶಕುಂತಲಾ ರಮೇಶ್ ಅವರು ಪ್ರಭಾರ ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ತಾಪಂ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ಅವರು, ತಮಗೆ ಸಿಕ್ಕಿರುವ ಕೆಲವೇ ದಿನಗಳ ಅಧಿಕಾರಾವಧಿಯಲ್ಲಿ ಗ್ರಾಮೀಣ ಭಾಗದ ಜನರಿಗೆ ಮೂಲ ಸೌಕರ್ಯ ಒದಗಿಸಲು ಶ್ರಮಿಸುವುದಾಗಿ ಹೇಳಿದರು.
ಈ ಹಿಂದೆ ಅಧ್ಯಕ್ಷರಾಗಿದ್ದ ಕವಿತಾ ರವಿ ಪಕ್ಷದ ಆಂತರಿಕ ಒಪ್ಪಂದದಂತೆ ರಾಜಿನಾಮೆ ನೀಡಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಉಪಾಧ್ಯಕ್ಷರಾಗಿದ್ದ ಶಕುಂತಲಾ ರಮೇಶ್ ಅಧಿಕಾರ ವಹಿಸಿಕೊಂಡರು.
ನಿರ್ಗಮಿತ ಅಧ್ಯಕ್ಷೆ ಕವಿತಾ ರವಿ, ಮಾಜಿ ಅಧ್ಯಕ್ಷೆ ಹೇಮಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ಸಾದಿಕ್ ಖಾನ್, ಸದಸ್ಯರಾದ ನಾಗಣ್ಣ, ಕೃಷ್ಣೇಗೌಡ, ಹಾಡ್ಯ ಮಹದೇವಸ್ವಾಮಿ, ತಂದ್ರೆ ರವಿ, ಚಿಕ್ಕೇಗೌಡ, ರಾಮಪ್ಪ, ಮುಖಂಡರಾದ ಕೊಳೂರು ರಮೇಶ್, ರವಿಕುಮಾರ್, ತಾಪಂ ವ್ಯವಸ್ಥಾಪಕ ಶಂಭುಗೌಡ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.