ಮೈಸೂರು

ಪ್ರತಿ ಜಿಲ್ಲೆಯಲ್ಲೂ 100 ಮಂದಿಗೆ ಉದ್ಯೋಗ: ಮುನಿಯಪ್ಪ

Published On :

ಮೈಸೂರು: ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ (ಪಿಎಂಇಜಿಪಿ) ಪ್ರತಿ ವರ್ಷ ಪ್ರತಿ ಜಿಲ್ಲೆಗಳಲ್ಲೂ ನೂರು ಮಂದಿ ಯುವಕ-ಯುವತಿಯರಿಗೆ ಉದ್ಯೋಗ ಸೃಷ್ಟಿಸಲಾಗುವುದು ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಕೇಂದ್ರ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಮಂತ್ರಾಲಯ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಸಂಯುಕ್ತಾಶ್ರಯದಲ್ಲಿ ನಗರದ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಸ್ಥಾಪಿಸಿರುವ ಪ್ರಧಾನಮಂತ್ರಿಗಳ ವಲಯ ಮಟ್ಟದ ಉದ್ಯೋಗವರ್ಧನೆ ಕಾರ್ಯಕ್ರಮದ ವಸ್ತುಪ್ರದರ್ಶನ ಮಳಿಗೆ ಉದ್ಘಾಟಿಸಿ ಮಾತನಾಡಿದರು. 12ನೇ ಪಂಚವಾರ್ಷಿಕ ಯೋಜನೆಯಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಗೆ 2,500 ಕೋಟಿ ಮೀಸಲಿಡಲಾಗಿದೆ. ಪ್ರತಿ ಜಿಲ್ಲೆಯಲ್ಲಿಯೂ ನೂರು ಮಂದಿಯನ್ನು ಮೂರು ತಿಂಗಳೊಳಗೆ ಆಯ್ಕೆ ಮಾಡಿ ತರಬೇತಿ ನೀಡಿ, ಅವರಿಗೆ ಸಾಲ ನೀಡುವ ಮೂಲಕ ಉದ್ಯೋಗ ಕಂಡುಕೊಳ್ಳುವಂತೆ ಮಾಡಲಾಗುವುದು. ತರಬೇತಿ ಕೇಂದ್ರವನ್ನು ಸದ್ಯಕ್ಕೆ ಬೆಂಗಳೂರಿನ ದೇವನಹಳ್ಳಿಯಲ್ಲಿ ಸ್ಥಾಪಿಸಲಾಗಿದ್ದು, ಪ್ರತಿ ಜಿಲ್ಲೆಯಲ್ಲಿಯೂ ಸ್ಥಾಪಿಸಬೇಕೆಂಬ ಉದ್ದೇಶವಿದೆ ಎಂದರು.  18 ರಿಂದ 30 ವರ್ಷದೊಳಗಿನ ಯುವಜನತೆ ಈ ಸೌಲಭ್ಯ ಪಡೆದುಕೊಳ್ಳಬಹುದು. ಎಲ್ಲರೂ ಇರುವ ಅವಕಾಶವನ್ನು ಬಳಸಿಕೊಂಡು ಮುಂದೆ ಬರಬೇಕು. ಈ ಸೌಲಭ್ಯ ಪಡೆಯಲು 8ನೇ ತರಗತಿ ಓದಿದರೆ ಸಾಕು. ಸ್ವತಂತ್ರವಾಗಿ ಬದುಕಬಹುದು. ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುವುದರಿಂದ ಹೆಚ್ಚಿನ ಸಹಕಾರ ದೊರಕಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿಯೂ ತರಬೇತಿ ಕೇಂದ್ರ ತೆರೆಯಲಾಗುವುದು. ಇದರ ಮೂಲಕ ಗುಡಿ ಕೈಗಾರಿಕೆಗೆ ಉತ್ತೇಜನ ನೀಡಿ ಭಾರತದಿಂದ ರಫ್ತುಮಾಡುವ ಪ್ರಕ್ರಿಯೆಗೆ ಮತ್ತಷ್ಟು ಬಲ ನೀಡಲಾಗುವುದು. ಈಗಾಗಲೇ ಶೇ.40 ರಷ್ಟು ಪದಾರ್ಥಗಳನ್ನು ವಿದೇಶಗಳಿಗೆ ರಫ್ತು ಮಾಡುತ್ತಿದ್ದೇವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.