ಕಾಲುಬಾಯಿ ಜ್ವರ ತಡೆಗೆ ಒತ್ತಾಯಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ ಮೈಸೂರು ಅ. 11
ಕಾಲುಬಾಯಿ ಜ್ವರದಿಂದ ಜಾನುವಾರುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಸಂಘಟನೆ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಮೀಪ ಪ್ರತಿಭಟಿಸಿದರು.
ರಾಜ್ಯದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಜಾನುವಾರುಗಳು ಕಾಲುಬಾಯಿ ಜ್ವರಕ್ಕೆ ತುತ್ತಾಗುತ್ತಿವೆ. ಪಶು ಸಂಗೋಪನಾ ಇಲಾಖೆ ಇದ್ದರೂ ಇಲ್ಲದಂತಿದೆ. ಹಾಲು ಉತ್ಪಾದಕನೆಗೆ ಧಕ್ಕೆಯಾಗುತ್ತಿದೆ. ಹೈನುಗಾರಿಕೆಯನ್ನೆ ನಂಬಿ ಜೀವನ ಮಾಡುತ್ತಿರುವ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಆದ್ದರಿಂದ ಕೂಡಲೆ ರೋಗ ಕಡಿವಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾಲುಬಾಯಿ ಜ್ವರದಿಂದ ಸತ್ತ ಜಾನುವಾರುಗಳಿಗೆ ಕೂಡಲೆ 30 ಸಾವಿರ ಪರಿಹಾರ ನೀಡಬೇಕು. ರೋಗಕ್ಕೆ ತುತ್ತಾಗಿ ನರಳುತ್ತಿರುವ ಜಾನುವಾರುಗಳ ರಕ್ಷಣೆಗೆ ವಿಶೇಷ ಪ್ರೋತ್ಸಾಹ ನೀಡಬೇಕು, ಜಾನುವಾರು ಸತ್ತ ಕುಟುಂಬಗಳಿಗೆ ಹೊಸ ಜಾನುವಾರುಗಳನ್ನು ಖರೀದಿಸಲು ಬಡ್ಡಿ ರಹಿತ ಸಾಲ ನೀಡುವ ಯೋಜನೆ ಜಾರಿಗೆ ತರಬೇಕು, ಎಲ್ಲಾ ಜಾನುವಾರಿಗೂ ಕಡ್ಡಾಯವಾಗಿ ವಿಮೆ ಮಾಡಿಸಬೇಕು, ಪಶುಸಂಗೋಪನೆ ಇಲಾಖೆಯನ್ನು ನಿದ್ರೆಯಿಂದ ಎಚ್ಚರಿಸಿ ಕೂಡಲೆ ಲಸಿಕೆ ಕೊಡಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಧ್ಯಕ್ಷ ಕುರುಬೂರು ಶಾಂತಕುಮಾರ್, ಜಿಲ್ಲಾಧ್ಯಕ್ಷ ಕೂಡನಹಳ್ಳಿ ರಾಜಣ್ಣ, ಪ್ರಧಾನ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

