'ವಾರದೊಳಗೆ ಸಾಮಾಜಿಕ ಭದ್ರತಾ ಮಂಜೂರಾತಿ ಪತ್ರ'
ಕ.ಪ್ರ.ವಾರ್ತೆ ಭೇರ್ಯ ಅ. 15
ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ವಾರದೊಳಗೆ ಮನೆ ಬಾಗಿಲಿಗೆ ಮಂಜೂರಾತಿ ಪತ್ರ ತಲುಪಿಸಲಾಗುವುದು ಎಂದು ತಹಸೀಲ್ದಾರ್ ವೀಣಾ ಹೇಳಿದರು. ಮಿರ್ಲೆ ಗ್ರಾಮದ ನಾಡಕಚೇರಿಯಲ್ಲಿ ಮಂಗಳವಾರ ನಡೆದ ಪಿಂಚಣಿ ಅದಾಲತ್‌ನಲ್ಲಿ ಅರ್ಜಿ ಸ್ವೀಕರಿಸಿ ಮಾತನಾಡಿದ ಅವರು, ಅರ್ಹರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಲು ಮೀನಮೇಷ ಎಣಿಸಬೇಡಿ ಎಂದರು. ಅರ್ಜಿ ಸಲ್ಲಿಸಿರುವವರು ಪದೇ ಪದೇ ಕಚೇರಿಗೆ ಅಲೆಯಬಾರದು. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮನಸ್ವಿನಿ ಯೋಜನೆಯಡಿ ಅರ್ಹರು ತಾಲೂಕಿನಲ್ಲಿರುವ ನಾಡ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು. ಇದೇ ವೇಳೆ ವಿಧವಾ, ವಿಕಲಚೇತನ, ವೃದ್ಧಾಪ್ಯ ವೇತನ ಮಂಜೂರಾತಿ ಪತ್ರ ವಿತರಿಸಲಾಯಿತು. ಪ್ರಭಾರ ಉಪ ತಹಸೀಲ್ದಾರ್ ಶಿವರಾಮಯ್ಯ, ಗ್ರಾಮ ಲೆಕ್ಕಿಗರಾದ ಶೇಖರೇಗೌಡ, ಭಾಸ್ಕರ್, ಇಲಾಖೆ ನೌಕರರಾದ ಕರೀಗೌಡ, ರೇವಣ್ಣ, ಕೃಷಿ ಇಲಾಖೆಯ ಪ್ರಕಾಶ್, ಅಂಕನಹಳ್ಳಿ ಗ್ರಾಪಂ ಸದಸ್ಯ ಲೋಕೇಶ್ ಇದ್ದರು.
ವಾಜಪೇಯಿ ಆರೋಗ್ಯಶ್ರೀ ಕಚೇರಿ ಉದ್ಘಾಟನೆ
ಕೆ.ಆರ್. ನಗರ: ಬಿಪಿಎಲ್ ಪಡಿತರದಾರರಿಗೆ ಉಚಿತ ಚಿಕಿತ್ಸೆ ನೀಡುವ ಸಲುವಾಗಿ ವಾಜಪೇಯಿ ಆರೋಗ್ಯಶ್ರೀ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಇದರ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕೆಂದು ತಾಪಂ ಸದಸ್ಯ ನಾಗಣ್ಣ ಹೇಳಿದರು. ಸಾರ್ವಜನಿಕ ಆಸ್ಪತ್ರೆಯಲ್ಲಿ ವಾಜಪೇಯಿ ಆರೋಗ್ಯಶ್ರೀ ಯೋಜನೆಯ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ 1.5 ಲಕ್ಷದವರೆಗೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡುವ ಯೋಜನೆ ಇದಾಗಿದ್ದು, ಚಿಕಿತ್ಸೆಗೆ ಸಂಬಂಧಿಸಿದಂತೆ ಈ ಕಚೇರಿಯಲ್ಲಿ ಮಾಹಿತಿ ದೊರೆಯಲಿದೆ ಎಂದು ತಿಳಿಸಿದರು. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಎಚ್. ರಾಮಚಂದ್ರ, ಡಾ. ಕಿಶೋರ್, ಡಾ. ಅಶೋಕ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

