ಮೈಸೂರು

'ಹಿರಿಯ ಸಹಕಾರಿಗಳಿಂದ ಪಾಠ ಕಲಿಯಿರಿ'

Published On :

ಕ.ಪ್ರ.ವಾರ್ತೆ , ಸಾಲಿಗ್ರಾಮ ಅ. 16
ಸಹಕಾರ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಸಹಕಾರಿಗಳಿಂದ ಇಂದಿನ ಸಹಕಾರ ಕ್ಷೇತ್ರದ ಕಾರ್ಯಕರ್ತರು ಕಲಿಯಬೇಕಾದುದು ಹೆಚ್ಚಿನದಾಗಿದೆ ಎಂದು ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಕೆ. ಮಧುಚಂದ್ರ ಹೇಳಿದರು.
ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಬುಧವಾರ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್.ಎಸ್. ರಾಮಕೃಷ್ಣೇಗೌಡ ಮತ್ತು ಎಪಿಎಂಸಿ ನಿರ್ದೇಶಕ ಕುಪ್ಪಹಳ್ಳಿ ಸೋಮಶೇಖರ್ ವಿದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆ ಅವರಿಗೆ ಸಂಘದ ವತಿಯಿಂದ ಅಭಿನಂದಿಸಿ ಪ್ರವಾಸಕ್ಕೆ ಶುಭ ಕೋರಿ ಬೀಳ್ಕೊಟ್ಟು ಮಾತನಾಡಿದ ಅವರು, ಪ್ರವಾಸ ಸುಖಕರವಾಗಿರಲಿ ಹಾಗೂ ಅಲ್ಲಿನ ವಿಷಯಗಳು ಇಲ್ಲಿಗೂ ತಲುಪಿ ಪರಸ್ಪರ ಆಚಾರ-ವಿಚಾರ ವಿನಿಮಯವಾಗಲಿ ಎಂದು ತಿಳಿಸಿದರು.
ಇದೆ ವೇಳೆ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್.ಎಂ. ಸೋಮಣ್ಣ, ತಾಪಂ ಮಾಜಿ ಸದಸ್ಯ ಎಸ್.ಎಂ. ಶ್ರೀನಿವಾಸಗೌಡ, ಜೆಡಿಎಸ್ ಮುಖಂಡರಾದ ರಾಜಣ್ಣ, ಪ್ರಕಾಶ್, ಎಸ್.ಕೆ. ಯೋಗಣ್ಣ, ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಮಹೇಶ್, ಕಾರ್ಯದರ್ಶಿ ಮಂಜುನಾಥ್, ಶಿಕ್ಷಕ ರಮೇಶ್ ಶುಭ ಕೋರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.