ಮೈಸೂರು

ಸಾರಾಯಿ ಮಾರಾಟಗಾರರು ಬೀದಿಪಾಲು

Published On :

ಕ.ಪ್ರ.ವಾರ್ತೆ ,  ಮೈಸೂರು ,  ಅ. 18
ರಾಜ್ಯದಲ್ಲಿ ಸಾರಾಯಿ ನಿಷೇಧ ಮಾಡಿದ್ದರಿಂದ ಮಾರಾಟಗಾರರು ಬೀದಿಪಾಲಾದರು ಎಂದು ಮಾಜಿ ಸಚಿವ ಆರ್.ಎಲ್. ಜಾಲಪ್ಪ ಹೇಳಿದರು.
    ಶ್ರೀಮತಿ ವಿಜಯಲಕ್ಷ್ಮೀ ಮತ್ತು ಆರ್.ಎಲ್. ಜಾಲಪ್ಪ ಎಜುಕೇಷನ್ ಫೌಂಡೇಷನ್ ಹಾಗೂ ಮೈಸೂರು-  ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಏರ್ಪಡಿಸಿದ್ದ ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಸಾರಾಯಿ ಮಾರಾಟ ನಿಷೇಧಿಸಿದರು. ಅದನ್ನೇ ನಂಬಿಕೊಂಡಿದ್ದ ಈಡಿಗರು ಬೀದಿಗೆ ಬಂದರು. ಇಂದು ಹಳ್ಳಿ ಹಳ್ಳಿಯಲ್ಲೂ ಮನೆ ಮನೆಗಳಲ್ಲೂ ಸಾರಾಯಿ ಮಾರಾಟ ಮಾಡಲಾಗುತ್ತಿದೆ. ರಾಮನಗರದಲ್ಲಿ ಲೈಸನ್ಸ್ ಪಡೆದು ಸಾರಾಯಿ ಮಾಡುತ್ತಿರುವವ 403 ಮಂದಿಯಲ್ಲಿ ಈಡಿಗರು ಕೇವಲ 3 ಮಂದಿ. ಉಳಿದವರು ಯಾರು ಎಂದು ನಿಮಗೆ ಗೊತ್ತಿದೆ. ಕುಮಾರಸ್ವಾಮಿ ತಾವು ಏನನ್ನೊ ಸಾಧಿಸಿದ್ದೇವೆ ಎಂದು ಬೀಗುತ್ತಿದ್ದಾರೆ. ತಾವು ಮಾಡಿದ್ದನ್ನು ಹಿಂದಕ್ಕೆ ತಿರುಗಿ ನೋಡಿಕೊಳ್ಳಬೇಕು ತಿರುಗೇಟು ನೀಡಿದರು.
ರಾಜ್ಯದಲ್ಲಿ ಸಾರಾಯಿ ನಿಷೇಧ ಮಾಡಿದ್ದರಿಂದ ಕುಡಿಯುವವರ ಸಂಖ್ಯೆ ಕಡಿಮೆಯಾಯಿತೆ ಎಂಬುದರ ಬಗ್ಗೆ ಸಂಶೋಧನೆ ನಡೆಸಲಿ. ನಿಷೇಧದಿಂದ ಸಾರಾಯಿ ದರ ಏರಿಕೆಯಾಯಿತು. ಇದರಿಂದ ಈಡಿಗರು ಸಂಕಷ್ಟಕ್ಕೆ ಸಿಲುಕಿದರು. ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಯಿತು ಎಂದರು.
ಮೈಸೂರು- ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ಕೆ. ಪೋತರಾಜು ವೈಯಕ್ತಿಕವಾಗಿ 5 ಲಕ್ಷ ದೇಣಿಗೆ ನೀಡಿದರು. ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳ ಆರ್ಯ ಈಡಿಗರ ಸಮಾಜದ 121 ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಜೆ.ಪಿ. ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ವಿಜಯಲಕ್ಷ್ಮೀ ಮತ್ತು ಆರ್.ಎಲ್. ಜಾಲಪ್ಪ ಎಜುಕೇಷನ್ ಫೌಂಡೇಷನ್ ವ್ಯವಸ್ಥಾಪಕ ಜಿ.ಎನ್. ನಾಗರಾಜು, ತಿಮ್ಮೇಗೌಡ, ಕೆ.ಎಸ್. ಕೃಷ್ಣಮೂರ್ತಿ, ರಾಜಶೇಖರ ಕದಂಬ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.