ಮೈಸೂರು

ವೈನ್ ಉತ್ಸವ ವಿರುದ್ಧ ಪ್ರತಿಭಟನೆ

Published On :

ಕ.ಪ್ರ.ವಾರ್ತೆ ,  ಮೈಸೂರು ,  ಅ. 18
ದ್ರಾಕ್ಷಾರಸ ಮಂಡಳಿ ಹಾಗೂ ತೋಟಗಾರಿಕೆ ಇಲಾಖೆಯು ದ್ರಾಕ್ಷಾರಸ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ ನಗರದಲ್ಲಿ ಏರ್ಪಡಿಸಿರುವ ಮೂರು ದಿನಗಳ ದ್ರಾಕ್ಷಾರಸ ಉತ್ಸವದ ಮೂಲಕ ವೈನ್ ಕುಡಿತಕ್ಕೆ ಪ್ರೋತ್ಸಾಹ ನೀಡುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿದವು.
ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವ ಸಂಘಟನೆ(ಎಐಡಿವೈಒ), ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ(ಎಐಡಿಎಸ್‌ಒ), ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಸಂಯುಕ್ತಾಶ್ರಯದಲ್ಲಿ ನಗರದ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟಿಸಿ, ಸರ್ಕಾರದ ನಿರ್ಧಾರವನ್ನು ಖಂಡಿಸಲಾಯಿತು. ಹಾಗೆ ಸರ್ಕಾರವು ತನ್ನ ನೀತಿಯನ್ನು ತಕ್ಷಣ ಹಿಂಪಡೆಯುವಂತೆಯೂ ಒತ್ತಾಯಿಸಲಾಯಿತು.
ಮುಂಬರುವ ದಿನಗಳಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಿರುವ ಅಂತಾರಾಷ್ಟ್ರೀಯ ವೈನ್ ಉತ್ಸವಕ್ಕೆ ಪೂರಕವಾಗಿ ಮೈಸೂರು ಸೇರಿದಂತೆ ರಾಜ್ಯದ ಮೂರು ವಿಭಾಗಗಳಲ್ಲಿ ಇಂತಹ ವೈನ್ ಉತ್ಸವಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಪೂರಕವಾಗಿ ಸರ್ಕಾರ ಅಬ್ಬರದ ಪ್ರಚಾರ ನಡೆಸುತ್ತಿರುವುದು ಅತ್ಯಂತ ಖಂಡನೀಯ. ವೈನ್ ಬಗೆಗೆ ಅರಿವು ಮೂಡಿಸುತ್ತಿರುವುದಾಗಿ ದ್ರಾಕ್ಷಾರಸ ಮಂಡಳಿ ಯುವಕರನ್ನು ದಾರಿತಪ್ಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ಎಐಎಂಎಸ್‌ಎಸ್ ಉಪಾಧ್ಯಕ್ಷೆ ಸೀಮಾ ಜಿ. ಸ್ವಾಮಿ, ಎಐಡಿಒಸಿ ಕಾರ್ಯದರ್ಶಿ ಸುನಿಲ್, ಎಐಡಿಎಸ್‌ಒ ಕಾರ್ಯದರ್ಶಿ ಮುದ್ದುಕೃಷ್ಣ, ನಾಗೇಶ್, ನರಸಿಂಹೇಗೌಡ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.