ಮೈಸೂರು

ನೋಟು ಮುದ್ರಣಾಲಯ; ಕನ್ನಡಿಗರಿಗೆ ಅನ್ಯಾಯ

Published On :

ಕ.ಪ್ರ.ವಾರ್ತೆ ಮೈಸೂರು ಅ. 19
ಮೈಸೂರಿನ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಘಟಕದಲ್ಲಿನ ಉದ್ಯೋಗ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದೆ ಎಂದು ಕನ್ನಡ ಕ್ರಿಯಾ ಸಮಿತಿ ಆರೋಪಿಸಿದೆ.
ಕಳೆದ ಎರಡು ದಶಕಗಳ ಹಿಂದೆ ಪ್ರಾರಂಭವಾದ ಈ ಘಟಕಕ್ಕೆ ಈವರೆಗೆ 520 ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅದರಲ್ಲಿ ಕೇವಲ 120 ಮಂದಿ ಮಾತ್ರ ಕನ್ನಡಿಗರಿದ್ದಾರೆ. 1996ರಲ್ಲಿ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಿದ ಫಲವಾಗಿ ಆ ಸಂದರ್ಭದಲ್ಲಿ ಕನ್ನಡಿಗರ ನೇಮಕಾತಿ ನೇಮಕಾತಿಯಾಗಿದೆ ಎಂದು ಸಮಿತಿ ಉಪಾಧ್ಯಕ್ಷ ಎಂ.ಬಿ. ವಿಶ್ವನಾಥ್ ಹಾಗೂ ಪ್ರಧಾನ ಕಾರ್ಯದರ್ಶಿ ಸ.ರ. ಸುದರ್ಶನ್ ತಿಳಿಸಿದ್ದಾರೆ.
ಅನ್ಯ ರಾಜ್ಯದವರೇ ಹೆಚ್ಚಾಗಿ ನೇಮಕವಾಗಿದ್ದು, ಕಳೆದ 17 ವರ್ಷಗಳಿಂದ ಕನ್ನಡಿಗರ ನೇಮಕಾತಿ ಆಗಿಲ್ಲ. ಬೆಂಗಳೂರಿನಲ್ಲಿ 10 ವರ್ಷಗಳಿಂದ ವಾಸವಾಗಿರುವ ಅನ್ಯ ಭಾಷಿಕರನ್ನು ಕನ್ನಡಿಗರೆಂದು ಅಧಿಕಾರಿಗಳು ತೋರಿಸುತ್ತಾರೆ. ಆದರೆ ಅವರಿಗೆ ಕನ್ನಡ ಓದಲು ಹಾಗೂ ಬರೆಯಲು ಬರುವುದಿಲ್ಲ. ಇತ್ತೀಚೆಗೆ ಆನ್‌ಲೈನ್ ಮೂಲಕ ನೇಮಕಾತಿಗೆ ಅರ್ಜಿ ಕರೆದು ಅ.14 ಕಡೆಯ ದಿನವೆಂದು ನಿಗದಿ ಮಾಡಿ ಕರ್ನಾಟಕದ ಗ್ರಾಮೀಣ ಅಭ್ಯರ್ಥಿಗಳಿಗೆ ವಂಚಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ನೇಮಕಾತಿ ಪರೀಕ್ಷೆಯನ್ನು ಆನ್‌ಲೈನ್‌ನಲ್ಲಿ ಮಾಡುವುದರಿಂದ ಐಐಟಿ ಮಟ್ಟದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದರ ತಿಳಿವಳಿಕೆ ಲಭ್ಯವಿಲ್ಲ. ಆದ್ದರಿಂದ ಕಡೆಯ ದಿನವನ್ನು ವಿಸ್ತರಿಸಬೇಕು, ಆನ್‌ಲೈನ್ ಪರೀಕ್ಷೆ ರದ್ದು ಮಾಡಬೇಕು. ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಬೇಕು ಎಂದ ಅವರು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರೋಜಿನಿ ಮಹಿಷಿ ವರದಿ ಜಾರಿಗೆ ಭರವಸೆ ನೀಡಿರುವುದು ಸ್ವಾಗತಾರ್ಹ. ಇಂತಹ ಸಂದರ್ಭದಲ್ಲಿ ಮೈಸೂರಿನ ನೋಟು ಮುದ್ರಣಾಲಯದಲ್ಲಿ ಕನ್ನಡಿಗರಿಗೆ ಅನ್ಯಾಯವನ್ನು ಸರಿಪಡಿಸುವಲ್ಲಿ ಸರ್ಕಾರ ಮುಂದಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.