ಮೈಸೂರು

ಶಿರಾದಲ್ಲಿ ಅಬಕಾರಿ ಅಕಾಡೆಮಿ: ಜಾರಕಿಹೊಳಿ

Published On :

ಕ.ಪ್ರ.ವಾರ್ತೆ ಮೈಸೂರು ಅ. 21
ಶಿರಾದಲ್ಲಿ ಅಬಕಾರಿ ಅಕಾಡೆಮಿ ಸ್ಥಾಪಿಸುವುದಾಗಿ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಸಯ್ಯಾಜಿರಾವ್ ರಸ್ತೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸೋಮವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಶಿರಾದಲ್ಲಿ ಅಬಕಾರಿ ಇಲಾಖೆಗೆ ಸಂಬಂಧಿಸಿದ ಅಕಾಡೆಮಿ ಸ್ಥಾಪಿಸುವ ಉದ್ದೇಶ ಇದೆ. ಇಲಾಖೆಯಲ್ಲಿ ಖಾಲಿ ಇರುವ 2200 ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುವುದು. ಕಳ್ಳಭಟ್ಟಿ ತಯಾರಿಕೆಯಲ್ಲಿ ತೊಡಗಿರುವವರ ಸಮೀಕ್ಷೆ ನಡೆಸಲಾಗುತ್ತಿದೆ. ಇದುವರೆಗೆ ಸುಮಾರು 2 ಸಾವಿರ ಮಂದಿಯ ಪಟ್ಟಿ ಸಿದ್ಧವಾಗಿದೆ. ಇವರಿಗೆ ಪುನರ್ವಸತಿ ಕಲ್ಪಿಸಿ, ಪರ್ಯಾಯ ಉದ್ಯೋಗ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಮತ್ತೆ ಇವರು ಅದೆ ವೃತ್ತಿಯಲ್ಲಿ ತೊಡಗಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಸಾರಾಯಿ ನಿಷೇಧಕ್ಕೆ ಸರ್ಕಾರ ಬದ್ಧವಾಗಿದೆ. ಈ ವಿಷಯದಲ್ಲಿ ಯಾವುದೆ ನಿಲುವು ಬದಲಾವಣೆ ಇಲ್ಲ. ಅನಧಿಕೃತ ಮದ್ಯ ಮಾರಾಟಗಾರರಿಗೆ ಯಾವುದೆ ಮುಲಾಜಿಗೂ ಒಳಗಾಗದೆ ದಂಡ ವಿಧಿಸುವುದಾಗಿ ಹೇಳಿದ ಅವರು, ಸಂತೋಷ್ ಲಾಡ್ ವಿಷಯ ಮುಖ್ಯಮಂತ್ರಿಗಳಿಗೆ ಬಿಟ್ಟದ್ದು ಎಂದರು. ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, ನಿಗಮ, ಮಂಡಳಿಗಳಿಗೆ ಸದ್ಯದಲ್ಲಿಯೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನೇಮಕ ಮಾಡಲಾಗುವುದು. ಕಾರ್ಯಕರ್ತರೆಲ್ಲರೂ ಒಗ್ಗಟ್ಟಾಗಿ ಶ್ರಮಿಸುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಕಾರಣರಾಗಬೇಕು ಎಂದು ಕಿವಿಮಾತು ಹೇಳಿದರು. ಶಾಸಕ ಎಂ.ಕೆ. ಸೋಮಶೇಖರ್, ನಗರ ಕಾಂಗ್ರೆಸ್ ಅಧ್ಯಕ್ಷ ಸಿ. ದಾಸೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯೆ ಮುಕ್ತರುನ್ನೀಸ್ಸಾ ಬೇಗಂ, ಪ್ರಧಾನ ಕಾರ್ಯದರ್ಶಿ ಎಂ. ಶಿವಣ್ಣ ಇದ್ದರು.

ತಾಯೂರು ಖಂಡನೆ
ಮೈಸೂರು: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವುದನ್ನು ಜಿಲ್ಲಾ ಕನ್ನಡ ಚಳವಳಿಗಾರರ ಕೇಂದ್ರ ಸಮಿತಿಯ ತಾಯೂರು ವಿಠಲಮೂರ್ತಿ ಖಂಡಿಸಿದ್ದಾರೆ. ಅಪಪ್ರಚಾರ ಮಾಡುವುದು ಮುಂದುವರೆದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಆರ್‌ಟಿಐ ಕಾರ್ಯಾಗಾರ
ಮೈಸೂರು: ಹೆಬ್ಬಾಳ್‌ನಲ್ಲಿರುವ ವಿ-ಲೀಡ್ ಸಂಸ್ಥೆಯಲ್ಲಿ ಅ.26ರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಸಕಾಲ ಮತ್ತು ಮಾಹಿತಿ ಹಕ್ಕು ಕಾಯಿದೆ ಕುರಿತ ಕಾರ್ಯಾಗಾರ ಏರ್ಪಡಿಸಿದ್ದು, ಆಸಕ್ತರು ಅ.24ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಕೋರಲಾಗಿದೆ. ಮೊ. 99454 94637 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.