ಮೈಸೂರು

ಸೋಸಲೆಯಲ್ಲಿ ರಾಷ್ಟ್ರಮಟ್ಟದ ಖೋ ಖೋ

Published On :

ಕ.ಪ್ರ.ವಾರ್ತೆ ಟಿ.ನರಸೀಪುರ ಅ. 22
ತಾಲೂಕಿನ ಸೋಸಲೆ ಗ್ರಾಮದಲ್ಲಿ ನ.22 ರಿಂದ 24ರವರೆಗೆ ರಾಷ್ಟ್ರಮಟ್ಟದ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ನವೋದಯ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ, ಕಾಂಗ್ರೆಸ್ ಯುವ ಮುಖಂಡ ಸುನಿಲ್ ಬೋಸ್ ಹೇಳಿದರು.
ಪಟ್ಟಣದ ಸರ್ಕಾರಿ ಅತಿಥಿಗೃಹದಲ್ಲಿ ಮಂಗಳವಾರ ನಡೆದ ರಾಷ್ಟ್ರಮಟ್ಟದ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿಯ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ರಾಜ್ಯಮಟ್ಟದ ಪಂದ್ಯಾವಳಿಗಳನ್ನು ಯಶಸ್ವಿಯಾಗಿ ನಡೆಸಿದ ಬಳಿಕ ದಕ್ಷಿಣ ಭಾರತ ವಿಭಾಗ ಮಟ್ಟದ ರಾಷ್ಟ್ರೀಯ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಅದಕ್ಕಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣವನ್ನು ಕ್ರೀಡಾಕೂಟಕ್ಕಾಗಿ ಸಜ್ಜುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕವಾಗಿ ಖೋ ಖೋ ಪಂದ್ಯಾವಳಿಗಳನ್ನು ನಡೆಸಲಾಗುವುದು. ರಾಜ್ಯ ಸೇರಿದಂತೆ ದಕ್ಷಿಣ ಭಾರತದ ಆರು ರಾಜ್ಯಗಳಿಂದಲೂ ಸುಮಾರು 15 ತಂಡಗಳಲ್ಲಿ 350ಕ್ಕೂ ಹೆಚ್ಚೂ ಕ್ರೀಡಾ ಪಟುಗಳು ಸ್ಪರ್ಧಿಸುವರು. 50ಕ್ಕೂ ಹೆಚ್ಚು ಕ್ರೀಡಾಧಿಕಾರಿಗಳು ಬರುವ ನಿರೀಕ್ಷೆ ಇದೆ. ಹಲವಾರು ದಶಕಗಳಿಂದ ಖೋ ಖೋ ನಂತಹ ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಿಕೊಂಡು ಬರುತ್ತಿರುವ ನವೋದಯ ಸ್ಪೋರ್ಟ್ಸ್ ಕ್ಲಬ್ನಿಂದ ಮೊದಲ ಬಾರಿಗೆ ರಾಷ್ಟ್ರಮಟ್ಟದ ಪಂದ್ಯಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
ವ್ಯಾಪಕ ಪ್ರಚಾರ: ಪಂದ್ಯಾವಳಿಯ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಪುಟ್ಟಸ್ವಾಮಿ ಮಾತನಾಡಿ, ರಾಜ್ಯಮಟ್ಟದ ಕ್ರೀಡಾಕೂಟದ ನಂತರ ರಾಷ್ಟ್ರಮಟ್ಟದ ಪಂದ್ಯಗಳನ್ನು ನಡೆಸಲಾಗುತ್ತಿದೆ.
ದಕ್ಷಿಣ ಭಾರತದ ರಾಜ್ಯಗಳಲ್ಲಿರುವ ಕ್ರೀಡಾ ಸಂಸ್ಥೆಗಳ ಮೂಲಕ ವ್ಯಾಪಕ ಪ್ರಚಾರ ಮಾಡಿದ್ದೇವೆ. ಖೋ ಖೋ ಕ್ರೀಡಾ ಸಂಸ್ಥೆಗಳು ಸಹಭಾಗಿತ್ವವನ್ನು ನೀಡುತ್ತಿವೆ. ಹೆಚ್ಚಿನ ಕ್ರೀಡಾಪಟುಗಳು ಸೇರುವ ನಿರೀಕ್ಷೆಯಿದೆ.
ಪಂದ್ಯಾವಳಿ ಉದ್ಘಾಟಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಹಾಗೂ ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಸೇರಿದಂತೆ ಪ್ರಮುಖರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದರು.
ಇದೇ ವೇಳೆ ಸೋಸಲೆ ಗ್ರಾಮದ ನವೋದಯ ಸ್ಪೋರ್ಟ್ಸ್ ಕ್ಲಬ್ಗೆ ನೂತನ ಗೌರವಾಧ್ಯಕ್ಷರಾಗಿ ಸುನಿಲ್ಬೋಸ್ ಅವರು ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಕ್ಲಬ್ನಿಂದ ಸನ್ಮಾನಿಸಲಾಯಿತು.
ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಪಿ.ಚಂದ್ರಶೇಖರ, ಉಪಾಧ್ಯಕ್ಷ ಎಸ್. ಮೋಹನ್ರಾಜ್, ಕ್ರೀಡಾ ಸಮಿತಿ ಅಧ್ಯಕ್ಷ ಎ. ಶಿವಕುಮಾರ್, ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ. ಪರಶಿವಮೂರ್ತಿ, ಜಿಲ್ಲಾ ಎಸ್ಟಿ ಕಾಂಗ್ರೆಸ್ ಅಧ್ಯಕ್ಷ ಹೊನ್ನನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಚ್. ಮಂಜುನಾಥ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಕೇತಳ್ಳಿ ಸಿದ್ದಶೆಟ್ಟಿ, ಕ್ಲಬ್ ನಿರ್ದೇಶಕ ಎಸ್. ನಾಗೇಶ, ಮಹೇಂದ್ರ, ಎಸ್.ಕೆ. ಶಿವಕುಮಾರ, ಮಹೇಶ, ಕುಮಾರ, ಬಸವರಾಜು, ತಾಪಂ ಮಾಜಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.