ಇಂದು ಹೃದ್ರೋಗ ಉಚಿತ ತಪಾಸಣೆ
ಕಿತ್ತೂರು: ಬೆಟ್ಟದಪುರ ಛಾಯಾಗ್ರಾಹಕರ ಮತ್ತು ವಿಡಿಯೋಗ್ರಾಹಕರ ಸಂಘದ ವತಿಯಿಂದ ಅ.23ರ ಬೆಳಗ್ಗೆ 9ಕ್ಕೆ ಮೈಸೂರಿನ ವಿಕ್ರಮ್ ಆಸ್ಪತ್ರೆ ಸಹಯೋಗದಲ್ಲಿ ಬೆಟ್ಟದಪುರದ ಪ್ರವಾಸಿ ಮಂದಿರದಲ್ಲಿ ನಡೆಯಲಿದೆ. ಅಂದು ಸಂಜೆ 5.30ಕ್ಕೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಹೃದಯ ಸಂಬಂಧಿ ಕಾಯಿಲೆ ಇರುವವರು ಉಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕೆ.ಬಿ. ನಟೇಶ್, ಮೊ. 9449746743, ಗಿರೀಶ್- ಮೊ. 9845464552 ಸಂಪರ್ಕಿಸಬಹುದು.
30 ರಂದು ಮಾಸಿಕ ಸಭೆ
ಮೈಸೂರು: ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಪಂ ಅಧ್ಯಕ್ಷ ಎಂ. ಮಹದೇವು ಅವರ ಅಧ್ಯಕ್ಷತೆಯಲ್ಲಿ ಅ.30ರ ಬೆಳಗ್ಗೆ 11ಕ್ಕೆ ಜಿಪಂ ಸಭಾಂಗಣದಲ್ಲಿ ಏರ್ಪಡಿಸಿದೆ.
ಅಂತಿಮ ಜೇಷ್ಠತಾ ಪಟ್ಟಿ ಪ್ರಕಟ
ಮೈಸೂರು: 2013-14ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಕನ್ನಡ ಮತ್ತು ಉರ್ದು ಸಹ ಶಿಕ್ಷಕ ವೃಂದದ ಅಂತಿಮ ಜೇಷ್ಠತಾ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹೇಳಿದ್ದಾರೆ. ಸಹಶಿಕ್ಷಕರ ಹುದ್ದೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿಗಾಗಿ ಕೌನ್ಸೆಲಿಂಗ್ ದಿನಾಂಕ ಸದ್ಯದಲೇ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಚೈತ್ರಶ್ರೀಗೆ ಡಾಕ್ಟರೇಟ್
ಮೈಸೂರು: ಡಾ.ಸಿ. ಶ್ರೀನಿವಾಸ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ ಚೈತ್ರಶ್ರೀ ಅವರ ಮಹಾಪ್ರಬಂಧವನ್ನು ಮೈಸೂರು ವಿವಿ ಅಂಗೀಕರಿಸಿ, ಜೀವ ವಿಜ್ಞಾನ ವಿಷಯದಲ್ಲಿ ಪಿಎಚ್.ಡಿ ನೀಡಿದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ಮಾಹಿತಿ
ಮೈಸೂರು: ಬೆಳಕವಾಡಿಯಲ್ಲಿರುವ ಜಿಐಎಂಡಿಎಸ್ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಸಂಗ್ರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಜುರೈಟ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ವಿಭಾಗದ ಮುಖ್ಯಸ್ಥ ಶ್ರೀರಾಮಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪದವಿ ಓದುತ್ತಿರುವಾಗಲೇ ಹತ್ತು ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕುಳಿತುಕೊಳ್ಳುವ ಅವಕಾಶಗಳಿರುತ್ತವೆ ಎಂದು ಅವರು ತಿಳಿಸಿದರು.
ಇಂದು ಪ್ರತಿಭಟನೆ
ಮೈಸೂರು: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ವಾದಿ) ಪದಾಧಿಕಾರಿಗಳು ಅ.23 ರಂದು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸುವರು. ಸೌಜನ್ಯಾ ಪ್ರಕರಣ ನಡೆದು ವರ್ಷವಾದರೂ ಪೊಲೀಸ್ ಇಲಾಖೆಯವರು ಆರೋಪಿಗಳನ್ನು ಬಂಧಿಸಿಲ್ಲ. ಪ್ರಕರಣದ ತನಿಖೆ ವಹಿಸಿಕೊಂಡಿರುವ ಸಿಐಡಿ ಸಹ ಇದೆ ಹಾದಿಯಲ್ಲಿದೆ. ಆದ್ದರಿಂದ ಸಿಐಡಿ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ಸಿಬಿಐ ಮಾತ್ರ ನಿಜವಾದ ಅಪರಾಧಿಗಳನ್ನು ಗುರುತಿಸಿ ಶಿಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಪಕ್ಷದ ಪದಾಧಿಕಾರಿಗಳು ಪ್ರತಿಭಟಿಸುವರು.
ನಾಳೆ ಮೈಸೂರು ಚಲೋ
ಮೈಸೂರು: ಮೈಸೂರು ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘದ ವತಿಯಿಂದ ಅ.24ರ ಬೆಳಗ್ಗೆ 11ಕ್ಕೆ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸುಬ್ಬರಾಯನಕೆರೆಯಲ್ಲಿ ಮೈಸೂರು ಚಲೋ- ಪ್ರಜಾಪ್ರಭುತ್ವ ಸ್ಥಾಪನಾ ದಿನಾಚರಣೆ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಜಗದೀಶ್ ತಿಳಿಸಿದ್ದಾರೆ.
ನಾಳೆ ಸಂಗೀತ ಕಛೇರಿ
ಮೈಸೂರು: ಸುಬ್ಬರಾಯನಕೆರೆಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಅ.24 ರಂದು ಸಂಜೆ 7.30ಕ್ಕೆ ರಾಜಗೋಪಾಲ್ ಭಾಗವತ್ ಅವರಿಂದ ಕರ್ನಾಟಕ ಸಂಗೀತ ಕಛೇರಿ ಏರ್ಪಡಿಸಲಾಗಿದೆ.
ಬಾಸ್ಕೆಟ್ಬಾಲ್ ಪಂದ್ಯ 26 ರಿಂದ
ಮೈಸೂರು: ಪುರುಷ ಹಾಗೂ ಮಹಿಳೆಯರ ರಾಜ್ಯಮಟ್ಟದ ಬಾಸ್ಕೆಟ್ಬಾಲ್ ಚಾಂಪಿಯನ್ಷಿಪ್ ಪಂದ್ಯಾವಳಿ ಅ.26 ರಿಂದ 31 ರವರೆಗೆ ನಜರಬಾದಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೈಸೂರು ಜಿಲ್ಲಾ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ಆಯೋಜಿಸಿರುವ ಅಸೋಸಿಯೇಷನ್ ಕಪ್ ಚಾಂಪಿಯನ್ಷಿಪ್ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಪುರುಷರ ವಿಭಾಗದಲ್ಲಿ ಒಟ್ಟು 56 ತಂಡಗಳು ಹಾಗೂ ಮಹಿಳೆಯರ ವಿಭಾಗದಲ್ಲಿ 20 ತಂಡಗಳು ಭಾಗವಹಿಸಲಿವೆ ಎಂದು ಸಂಘದ ಕಾರ್ಯದರ್ಶಿ ಪಿ. ಸೋಮಶೇಖರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

