ಮೈಸೂರು

ಬಿಎಸ್ವೈ ಹೇಳಿಕೆಗೆ ವ್ಯಾಪಕ ಖಂಡನೆ

Published On :

ಕ.ಪ್ರ.ವಾರ್ತೆ ಮೈಸೂರು ಅ. 22
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾರ್ವಜನಿಕ ಕ್ಷೇತ್ರದಲ್ಲಿರಲು ಅನರ್ಹ ವ್ಯಕ್ತಿ ಎಂದು ನಗರ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಎಚ್.ಎ. ವೆಂಕಟೇಶ್ ಕಿಡಿಕಾರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜಕೀಯ ಕ್ಷೇತ್ರದಲ್ಲಿರಲು ಅನರ್ಹ ವ್ಯಕ್ತಿಯಾಗಿದ್ದಾರೆ. ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಗೂಂಡಾಗಿರಿ ನಡೆಸುವ ವ್ಯಕ್ತಿಯಂತೆ ಯಡಿಯೂರಪ್ಪ ವರ್ತಿಸುತ್ತಿದ್ದಾರೆ. ರಾಜಕೀಯದ ಅಧಿಕಾರದಲ್ಲಿದ್ದಾಗ ಅವರ ಸ್ವಭಾವ ಗೊತ್ತಾಗುವುದಿಲ್ಲ. ಅಧಿಕಾರ ಕಳೆದುಕೊಂಡಾಗ ಅವರ ಸ್ವಭಾವ ಗೊತ್ತಾಗುತ್ತದೆ ಎಂಬುದಕ್ಕೆ ಯಡಿಯೂರಪ್ಪ ಸ್ಪಷ್ಟ ಉದಾಹರಣೆ ಎಂದು ತಿಳಿಸಿದ್ದಾರೆ.
ಆರ್ಎಸ್ಎಸ್ ಮತ್ತು ಬಿಜೆಪಿ ಯಡಿಯೂರಪ್ಪ ಅವರಿಗೆ ಎಂತಹ ಶಿಸ್ತು ಸಂಸ್ಕೃತಿ ಕಲಿಸಿದೆ ಎಂದು ಪ್ರಶ್ನಿಸಿರುವ ಅವರು, ಅಧಿಕಾರ ಕಳೆದುಕೊಂಡ ಅವರು ಮಾನಸಿಕ ಸ್ಥಿತಿ ಕಳೆದುಕೊಂಡು ಮನಬಂದಂತೆ ಮಾತನಾಡುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.
ಮೈಸೂರು  ಜಿಲ್ಲಾ ಕಾಂಗ್ರೆಸ್ ಕಾರ್ಮಿಕರ ವಿಭಾಗದ ಅಧ್ಯಕ್ಷ ಜಿ.ಎನ್. ಗೋಪಾಲರಾಜು ಹೇಳಿಕೆ ನೀಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಬಿ.ಎಸ್. ಯಡಿಯೂರಪ್ಪ ಅವರು ಏಕವಚನದಲ್ಲಿ ಮಾತನಾಡಿರುವುದು ಖಂಡನೀಯ ಎಂದಿದ್ದಾರೆ.
ಜಿಪಂ ಮಾಜಿ ಸದಸ್ಯೆ ರತ್ನಮ್ಮ ಗೋಪಾಲರಾಜು ಹೇಳಿಕೆ ನೀಡಿ, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೂಡಲೆ ಹಲವು ಯೋಜನೆ ಜಾರಿಗೆ ತಂದ ಸಿದ್ದರಾಮಯ್ಯ ಅವರು ಹೇಳಿಕೆ ಸಹಿಸಲಾಗದೆ ಯಡಿಯೂರಪ್ಪ ಅವರು ಏಕವಚನದಲ್ಲಿ ಮಾತನಾಡಿರುವುದು ಸರಿಯಲ್ಲ. ಸಿದ್ದರಾಮಯ್ಯ ಅವರು ಜೆಡಿಎಸ್ನಿಂದ ಹೊರಬಂದ ಬಳಿಕ ಬಿ.ಎಸ್. ಯಡಿಯೂರಪ್ಪ ಅವರು ಜೆಡಿಎಸ್ ಜೊತೆ ಕೈ ಜೋಡಿಸಿ ಅಧಿಕಾರ ಅನುಭವಿಸಿದ್ದಾರೆ. ಅಲ್ಲದೆ ಗಣಿ ಹಗರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದನ್ನು ಮರೆತಂತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.