ಇಬ್ಬರು ವ್ಯಕ್ತಿಗಳು ನಾಪತ್ತೆ
ಮೈಸೂರು: ಕೆ.ಆರ್. ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿದ್ದಾರೆ.
ಜೆಎಸ್ಎಸ್ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದ ಲೇ. ನಂಜಯ್ಯ ಎಂಬವರ ಪುತ್ರ ಎನ್. ಮಹದೇವ (50) ಅ.11 ರಿಂದ ನಾಪತ್ತೆಯಾಗಿದ್ದಾರೆ. ಚಹರೆ- 5.5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, ಎಡಗೈ ಮತ್ತು ಎದೆಯ ಮೇಲೆ ಕುಪ್ಪಮ್ಮ ಎಂಬ ಹಚ್ಚೆ ಇದೆ.
ಮೈಸೂರು ಮಹಾನಗರ ಪಾಲಿಕೆ ಸೈಕಲ್ ನಿಲ್ದಾಣದಲ್ಲಿ ಕೆಲಸ ಮಾಡಿಕೊಂಡಿದ್ದ ಲೇ. ಸಿದ್ದಯ್ಯ, ನಂಜಮ್ಮ ಎಂಬವರ ಪುತ್ರ ರಮೇಶ (40) ನಾಪತ್ತೆಯಾಗಿದ್ದಾರೆ. ರಮೇಶ್ಗೆ ಶೀಲಾ ಎಂಬವರೊಂದಿಗೆ ಮದುವೆಯಾಗಿ ಇಬ್ಬರು ಮಕ್ಕಳು ಇದ್ದಾರೆ. 6 ತಿಂಗಳ ಹಿಂದೆ ಶೀಲಾ ಜಗಳ ಮಾಡಿಕೊಂಡು ಮಕ್ಕಳೊಂದಿಗೆ ತವರಿಗೆ ಹೋಗಿದ್ದಾಳೆ. ಕೆಲಸಕ್ಕೆ ಹೋದ ಪುತ್ರ ರಮೇಶ್ ನಾಪತ್ತೆಯಾಗಿದ್ದು, ಆತನನ್ನು ಪತ್ತೆ ಮಾಡಿಕೊಡುವಂತೆ ನಂಜಮ್ಮ ಪೊಲೀಸರಿಗೆ ದೂರು ನೀಡಿದ್ದಾರೆ. ಚಹರೆ- 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ, ದೃಢಕಾಯ ಶರೀರ.
ಕಾಣೆಯಾಗಿರುವ ಈ ಇಬ್ಬರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ. 0821- 2418319, 519 ಸಂಪರ್ಕಿಸಲು ಕೆ.ಆರ್. ಠಾಣೆ ಪೊಲೀಸರು ಕೋರಿದ್ದಾರೆ.
ಮರಗೆಲಸ, ವೆಲ್ಡಿಂಗ್ ತರಬೇತಿ
ಮೈಸೂರು: ಮೈಸೂರಿನ ಚಾಮರಾಜೇಂದ್ರ ತಾಂತ್ರಿಕ ಸಂಸ್ಥೆಯ ವತಿಯಿಂದ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿ ತಲಾ 10 ಜನರಿಗೆ ಮರಗೆಲಸ ಮತ್ತು ವೆಲ್ಡಿಂಗ್ ಪಬ್ಲಿಕೇಷನ್ ವರ್ಕ್ಸ್ (ಯಂತ್ರಗಾರ) ವೃತ್ತಿಗಳಲ್ಲಿ 6 ತಿಂಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತರಬೇತಿಯ ಅವಧಿಯಲ್ಲಿ ಮಾಹೆಯಾನ 1,500 ಶಿಷ್ಯವೇತನ ನೀಡಲಾಗುವುದು. 18 ರಿಂದ 35 ವರ್ಷ ವಯೋವುತಿಯೊಳಗಿನ ಹಾಗೂ 7ನೇ ತರಗತಿ ವಿದ್ಯಾರ್ಹತೆ ಹೊಂದಿರುವ ಪ.ಜಾತಿ, ಪಂಗಡದ ಅಭ್ಯರ್ಥಿಗಳು ಅ.28 ರೊಳಗಾಗಿ ಅರ್ಜಿಗಳನ್ನು ಉಪನಿರ್ದೇಶಕರ ಕಚೇರಿ, ಜಯರಾಜೇಂದ್ರ ತಾಂತ್ರಿಕ ಸಂಸ್ಥೆ, ಮೈಸೂರು ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂ. 2443883ನ್ನು ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

