ಜ್ಞಾನವನ್ನೇ ಬಂಡವಾಳ ಮಾಡಿಕೊಳ್ಳಿ: ವರದೇಗೌಡ
ಮೈಸೂರು: ಸ್ವಯಂ ಉದ್ಯೋಗಕ್ಕೆ ಜ್ಞಾನವೆ ಮೂಲ ಬಂಡವಾಳ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಕೈಗಾರಿಕಾ ಉತ್ತೇಜನಾಧಿಕಾರಿ ಟಿ.ಸಿ. ವರದೇಗೌಡ ಹೇಳಿದರು.
ಮಹಾರಾಣಿ ಮಹಿಳಾ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಆರ್ಥಿಕ ವಿಚಾರ ವೇದಿಕೆ ಬುಧವಾರ ಏರ್ಪಡಿಸಿದ್ದ ಮಹಿಳಾ ಉದ್ದಿಮೆದಾರಿಕೆ, ಅಭಿವೃದ್ಧಿಯ ಅವಕಾಶಗಳು ಮತ್ತು ಸವಾಲುಗಳು ಕುರಿತ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಹಿಳಾ ಉದ್ದಿಮೆದಾರಿಕೆ ಅಭಿವೃದ್ಧಿಯ ಅವಕಾಶಗಳು ಕುರಿತು ಉಪನ್ಯಾಸ ನೀಡಿದರು.
ಸ್ವತಃ ಉದ್ಯಮ ಆರಂಭಿಸಲು ಬದ್ಧತೆ ಮತ್ತು ಜ್ಞಾನವನ್ನು ಬಂಡವಾಳವನ್ನಾಗಿ ಮಾಡಿಕೊಳ್ಳಬೇಕು. ಹೊಸ ಹೊಸ ಪ್ರಯೋಗಗಳನ್ನು ಮಾಡಬೇಕು. ಸರ್ಕಾರ 2 ರಿಂದ 25 ಲಕ್ಷದವರೆಗೆ ಸಾಲ ನೀಡುತ್ತದೆ. ಆದರೆ ಅದನ್ನು ಸದುಪಯೋಗ ಮಾಡಿಕೊಳ್ಳುವ ಮತ್ತು ತಮ್ಮ ಜ್ಞಾನದಿಂದ ಅಭಿವೃದ್ಧಿಪಡಿಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ ಎಂದರು.
ಉದ್ಯಮಿ ಲತಾ ಅವರು ಮಹಿಳಾ ಉದ್ದಿಮೆದಾರಿಕೆಯ ಸವಾಲುಗಳು ಕುರಿತು ಮಾತನಾಡಿ, ಕೇವಲ 50 ಸಾವಿರ ಸಾಲ ಪಡೆದು 21 ರೀತಿಯ ಔಷಧ ಮಾದರಿಯ ಪಾನೀಯಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದೇನೆ. ಈಗ ತಿಂಗಳಿಗೆ 40 ಸಾವಿರ ವಹಿವಾಟು ಆಗುತ್ತದೆ. ಆರು ಮಂದಿಗೆ ಉದ್ಯೋಗ ನೀಡಿದ್ದೇನೆ. ಉದ್ಯಮದಲ್ಲಿ ಯಶಸ್ಸು ಸಾಧಿಸಲು ಶ್ರಮ ಪಡಬೇಕಷ್ಟೆ. ನಗುವಿನಿಂದಲೆ ಉದ್ಯಮ ಅಭಿವೃದ್ಧಿ ಪಡಿಸಿಕೊಳ್ಳಬೇಕು. ಈಗ ಹಾಸ್ಯವೂ ವ್ಯಾಪಾರವಾಗುತ್ತಿದೆ ಎಂದು ಹೇಳಿದರು.
ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದ ಜಿಲ್ಲಾ ಉಪ ನಿರ್ದೇಶಕ ಬಿ.ಸಿ. ಲೋಕೇಶ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ.ಎಂ. ಪುರುಷೋತ್ತಮ್ ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎನ್. ನಂಜುಂಡಸ್ವಾಮಿ ಇದ್ದರು.
28ಕ್ಕೆ ಪಾಲಿಕೆ ಸಭೆ
ಮೈಸೂರು: ನಗರಪಾಲಿಕೆಯ ವಿಶೇಷ ಸಭೆಯು ಅ.28ರ ಬೆಳಗ್ಗೆ 11ಕ್ಕೆ ಹಾಗೂ ಬೆಳಗ್ಗೆ 11.30ಕ್ಕೆ ಸಾಮಾನ್ಯ ಸಭೆಯು ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಮೇಯರ್ ಎನ್.ಎಂ. ರಾಜೇಶ್ವರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

