ಮೈಸೂರು

ಕುಂದನಹಳ್ಳಿ: ಕಾಮಗಾರಿಗೆ 23 ಲಕ್ಷ ಬಿಡುಗಡೆ ಮಾಡಿ

Published On :

ಪಿರಿಯಾಪಟ್ಟಣ: ತಾಲೂಕಿನ ಹುಣಸವಾಡಿಯ ಗ್ರಾಪಂ ವ್ಯಾಪ್ತಿಯ ಕುಂದನಹಳ್ಳಿ ಗ್ರಾಮದ ಜನತಾ ಬಡಾವಣೆಯಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ ಕೈಗೊಳ್ಳಲು 23.10 ಲಕ್ಷ ಅನುದಾನ ಬಿಡುಗಡೆ ಮಾಡುವಂತೆ ಜಿಪಂ ಸಿಇಒ ಪಿ.ಎ. ಗೋಪಾಲ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರನ್ನು ಕೋರಿದ್ದಾರೆ. ಗ್ರಾಮದ ಆಶ್ರಯ ವಸತಿ ಯೋಜನೆಯಡಿ ನಿರ್ಮಾಣವಾಗಿರುವ ಜನತಾ ಬಡಾವಣೆಗೆ ರಸ್ತೆ ಮತ್ತು ಚರಂಡಿಗಳನ್ನು ನಿರ್ಮಿಸುವ ಬಗ್ಗೆ ಜಯಮ್ಮ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವರ ಫೋನ್ ಇನ್ ಕಾರ್ಯಕ್ರಮದಲ್ಲಿ ಮನವಿ ಮಾಡಿದ್ದಾರೆ.
ಈ ಗ್ರಾಮವು ಅಸ್ತಿತ್ವಕ್ಕೆ ಬಂದು ಸುಮಾರು 20 ವರ್ಷವಾಗಿದ್ದು, ಇಲ್ಲಿ ರಸ್ತೆ, ಚರಂಡಿ ಇತರೆ ಮೂಲಭೂತ ವ್ಯವಸ್ಥೆಗಳು ಇಲ್ಲ. ಇದುವರೆಗೆ ಪಂಚಾಯಿತಿ ಕಾರ್ಯದರ್ಶಿಯಿಂದ ಪ್ರಧಾನಿ, ರಾಷ್ಟ್ರಪತಿಯವರೆಗೆ ಅನೇಕ ಮನವಿ ಮಾಡಲಾಗಿದೆ. ಕಳೆದ ಐದು ವರ್ಷಗಳಿಂದ ಸರ್ಕಾರ ಎಲ್ಲ ಅಭಿವೃದ್ಧಿಯೇ ಆಡಳಿತ ಮಂತ್ರ ಎಂದು ಜಪ ಮಾಡುತ್ತೇವೆ. ಇನ್ನೂ ಸಹ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಈ ಬಡಾವಣೆ ಕಣ್ಣಿಗೆ ಕಾಣುತ್ತಿಲ್ಲ ಎಂದು ಆಶ್ವಾಸನೆ ನೀಡುತ್ತಾರೆ ಎಂದು ಜಯಮ್ಮ ಮತ್ತು ಶಿವಣ್ಣ ದೂರಿದ್ದಾರೆ.
ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಗ್ರಾಮಗಳ ಅಭಿವೃದ್ಧಿ ಬಗ್ಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ನಮ್ಮ ಬಡಾವಣೆಯ ದುಸ್ಥಿತಿಯ ಬಗ್ಗೆ ತಿಳಿಸಿ, ಪಂಚಾಯಿತಿಯಿಂದ ಪ್ರಧಾನಿಯವರಿಗೆ ಮನವಿ ಮಾಡಿರುವುದಾಗಿ ತಿಳಿಸಿದೆವು. ಆಗ, ಸಚಿವರು ಮಾತನಾಡಿ, ನಾನು ತನಿಖೆ ಮಾಡಿಸಿ, 15 ದಿನಗಳೊಳಗೆ ಬಡಾವಣೆ ಅಭಿವೃದ್ಧಿಗೆ ಕ್ರಮ ವಹಿಸುತ್ತೇನೆ ಹಾಗೂ ನಮ್ಮ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡುತ್ತಾರೆ ಎಂದು ತಿಳಿಸಿದರು. ಅಧಿಕಾರಿಗಳ ತಂಡ ಬಂದು ನಿಜ ಸ್ಥಿತಿ ನೋಡಿಕೊಂಡು ಹೋಗಿ, 23 ಲಕ್ಷ ಅಂದಾಜು ಪಟ್ಟಿ ತಯಾರಿಸಿದೆ. ಎರಡು ತಿಂಗಳು ಕಳೆದರೂ ಗ್ರಾಮದ ಕಡೆ ಒಬ್ಬರ ಸುಳಿವು ಇಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.