ಮೈಸೂರು

ಜೋರು ಮಳೆ: ಸಂಚಾರಕ್ಕೆ ಅಡ್ಡಿ

Published On :

ಕ.ಪ್ರ.ವಾರ್ತೆ ಮೈಸೂರು ಅ. 25
ಮೈಸೂರು ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು ಒಂದು ತಾಸು ಸುರಿದ ಜೋರು ಮಳೆಯಿಂದಾಗಿ ಕೆಲವೆಡೆ ವಾಹನ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಯಿತು.
ಜೋರಾಗಿ ಬಿದ್ದ ಮಳೆಗೆ ಚರಂಡಿ, ಹಳ್ಳಕೊಳ್ಳಗಳು ತುಂಬಿ ಹರಿದವು. ರಸ್ತೆಯ ಇಕ್ಕೆಲಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ಇನ್ನು ಹವಾಮಾನ ಮುನ್ಸೂಚನೆಯ ಪ್ರಕಾರ ಅ.26 ರಿಂದ 29 ರವರೆಗೆ ಮೋಡ ಕವಿದ ವಾತಾವರಣವಿದ್ದು, ಚದುರಿದಂತೆ ಅಲ್ಲಲ್ಲಿ ತುಂತುರಿನಿಂದ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಗಾಳಿಯು ಗಂಟೆಗೆ ಸರಾಸರಿ 3 ರಿಂದ 6 ಕಿ.ಮೀ. ವೇಗದಲ್ಲಿ ಬೀಸಲಿದೆ ಎಂದು ನಾಗನಹಳ್ಳಿ ಸಾವಯವ ಕೃಷಿ ಸಂಶೋಧನಾ ಕೇಂದ್ರದ ಕ್ಷೇತ್ರಾಧೀಕ್ಷಕ ಡಾ.ಸಿ. ಗೋವಿಂದರಾಜು, ಸಹ ಸಂಶೋಧಕ ಎನ್. ನರೇಂದ್ರಬಾಬು ತಿಳಿಸಿದ್ದಾರೆ.
ಇದೇ ವೇಳೆ ರೈತರು ಕೃಷಿ ಚಟುವಟಿಕೆಗಳನ್ನು ನಡೆಸುವಾಗ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಅವರು ಸೂಚನೆ ನೀಡಿದ್ದು, ಬಾಳೆ ಬೆಳೆಗೆ ಎಲೆ ಚುಕ್ಕೆರೋಗ ತಗುಲಿದ್ದರೆ ಬ್ಲೈಟ್ಯಾಕ್ಸ್ 3 ಗ್ರಾಂ ಔಷಧಳನ್ನು ಒಂದು ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಸಿಂಪಡಿಸಬೇಕು. ಎಲೆಗೆ ದ್ರಾವಣ ಅಂಟಿಕೊಳ್ಳಲು ಸೋಪಿನ ದ್ರಾವಣವನ್ನು ಮಿಶ್ರಣ ಮಾಡಿ ಸಿಂಪರಣೆ ಮಾಡಬೇಕು. ಬತ್ತಕ್ಕೆ ಗರಿ ಸುರುಳಿ ಹುಳು ದಾಳಿ ಮಾಡಿದ್ದರೆ ಕ್ಲೋರೋಫೈರಿಪಾಸ್ 2 ಮಿ.ಲೀ.ಯನ್ನು 20 ಇಸಿ ಔಷಧವನ್ನು 1 ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಸಿಂಪರಣೆ ಮಾಡುವುದು. ಬೆಂಕಿ ರೋಗದ ಹತೋಟಿಗೆ ಕಾರ್ಬೆಂಡಜಿಮ್ 1 ಗ್ರಾಂ ಔಷಧವನ್ನು 1 ಲೀಟರ್ ನೀರಿನಲ್ಲಿ ಟ್ರೈಸೈಕೆಜೋಲ್ 0.6 ಗ್ರಾಂ ಔಷಧವನ್ನು ಒಂದು ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಸಿಂಪಡಿಸುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.