'ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ'
ಕ.ಪ್ರ.ವಾರ್ತೆ ಮೈಸೂರು ಅ. 25
ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಹೇಳಿದರು.
ಜೆಎಸ್ಎಸ್ ಕಾನೂನು ಕಾಲೇಜಿನ ಮೈಕ್ಯಾಬ್ ಮತ್ತು ಕರ್ನಾಟಕ ಗ್ರಾಹಕರ ಪರಿಷತ್ತು ಸಂಯುಕ್ತವಾಗಿ ಗ್ರಾಹಕ ತರಂಗದ ಹತ್ತನೆ ವಾರ್ಷಿಕೋತ್ಸವ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಗ್ರಾಹಕರ ಸಮಸ್ಯೆ/ ಸವಾಲು ಮತ್ತು ಪರಿಹಾರ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಹಕರ ಹಕ್ಕು ರಕ್ಷಣೆ ಮಾಡುವ ಉದ್ದೇಶದಿಂದಲೆ ಗ್ರಾಹಕ ಕಾಯಿದೆ ಜಾರಿಗೆ ತರಲಾಗಿದೆ. ಆದರೆ ಅದನ್ನು ಸದುಪಯೋಗ ಮಾಡಿಕೊಳ್ಳಬೇಕು. ಆದ್ದರಿಂದ ಗ್ರಾಹಕರ ಹಕ್ಕುಗಳ ಕುರಿತು ಜಾಗೃತಿ ಮತ್ತು ಅರಿವು ಮೂಡಿಸಬೇಕಾದ ಅಗತ್ಯವಿದೆ. ಗ್ರಾಹಕರ ರಕ್ಷಣೆಗಾಗಿಯೇ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಗ್ರಾಹಕರ ಪರಿಷತ್ತು ಸ್ಥಾಪಿಸಲಾಗಿತ್ತು. ಈ ಪರಿಷತ್ತುಗಳು ಮತ್ತಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದರು. ಗ್ರಾಹಕರ ಪ್ರಕರಣಗಳನ್ನು ಕೂಡಲೆ ಇತ್ಯರ್ಥಪಡಿಸಬೇಕಾದ ಅಗತ್ಯ ಇದೆ. ಹೆಚ್ಚು ಸಮಯ ತೆಗೆದುಕೊಳ್ಳಬಾರದು. ಇಂತಹ ಪ್ರಕರಣಗಳಲ್ಲಿ ಹೆಚ್ಚು ಸಮಯ ತೆಗೆದುಕೊಂಡರೆ ತೊಂದರೆಗೆ ಒಳಗಾದ ಗ್ರಾಹಕರು ಮತ್ತಷ್ಟು ತೊಂದರೆಗೆ ಸಿಲುಕುತ್ತಾರೆ. ನನ್ನ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಿದ್ದಾಗಿ ಅವರು ಹೇಳಿದರು. ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು 15 ಕೋಟಿ ದಂಡ ವಿಧಿಸಿರುವ ಪ್ರಕರಣ, ನಾಯಿಗಳ ತಿಂಡಿ ತಯಾರಿಸುವ ಸಂಸ್ಥೆಯ ಪ್ರಕರಣ ಮತ್ತು ಕುಡಿಯುವ ನೀರಿನ ಬಾಟಲಿಯಲ್ಲಿ ಕಸ ಇದ್ದ ಪ್ರಕರಣಗಳ ಉದಾಹರಣೆ ನೀಡಿದರು.
ಲ್ಯಾಬ್ಲ್ಯಾಂಡ್ ಬಯೋಟೆಕ್ ಸಂಸ್ಥೆ ಅಧ್ಯಕ್ಷ ಡಾ. ಸುಧೀರ್ ಶೆಟ್ಟಿ ಅತಿಥಿಯಾಗಿ ಭಾಗವಹಿಸಿದ್ದರು. ಗ್ರಾಹಕ ತರಂಗದ ಸಂಪಾದಕ ಡಾ.ಎಸ್.ಪಿ. ತಿರುಮಲ ರಾವ್ ಪ್ರಾಸ್ತಾವಿಕ ಭಾಷಣ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

