ಮೈಸೂರು

ಸತ್ತೇಗಾಲ ಭೂ ಹಗರಣ: ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಶೀಘ್ರ ಪ್ರಕರಣ: ಗೋಮ

Published On :

ಮೈಸೂರು: ಶಿವನಸಮುದ್ರ ಬಳಿಯ ಸತ್ತೇಗಾಲದ 15 ಸಾವಿರ ಎಕರೆ ಭೂ ಹಗರಣ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾರದೊಳಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಗೋ. ಮಧುಸೂದನ್ ಹೇಳಿದ್ದಾರೆ.
ಮೈಸೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಭೂಮಿಗೆ ಸಂಬಂಧಿಸಿದಂತೆ ಚಾಮರಾಜನಗರದ ಜಿಲ್ಲಾಧಿಕಾರಿಯಾಗಿದ್ದ ಎಂ.ವಿ. ಸಾವಿತ್ರಿ ಅವರು ಹೊರಡಿಸಿರುವ ಆದೇಶದಿಂದ ನ್ಯಾಯಾಂಗ ನಿಂದನೆ ಆಗಿದೆ. ರಾಜ್ಯ ಸರ್ಕಾರವು ವಾರ ಕಳೆದರೂ ಆದೇಶ ರದ್ದುಗೊಳಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ, ಚಾಮರಾಜನಗರ ಜಿಲ್ಲಾಡಳಿತ (ಡಿಸಿ ಸಾವಿತ್ರಿ), ಕಂದಾಯ, ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ತಿಳಿಸಿದರು.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕು ಪಾಳ್ಯ ಹೋಬಳಿ ಸತ್ತೇಗಾಲದ ಸರ್ವೆ ನಂ.1 ಭೂಮಿಯಲ್ಲಿ ಅರಣ್ಯ ಇಲಾಖೆಯವರು ಬೇಲಿ ಹಾಕಿಕೊಂಡಿದ್ದಾರೆ. ಆದರೆ, ಸರ್ವೆ ನಂ.174ರ ಅರಣ್ಯ ಖರಾಬು ಸೇರಿ ಸುಮಾರು 15,000 ಎಕರೆ ಪ್ರದೇಶವಿದೆ. 2012ರಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ ನಕ್ಷೆ ಸಿದ್ಧಪಡಿಸಿದೆ. ಇದರಲ್ಲಿ 4 ಸಾವಿರ ಎಕರೆ ಭೂಮಿ ಒತ್ತುವರಿ ಆಗಿದೆ. ಡಿಸಿ ಸಾವಿತ್ರಿ ಅವರ ಆದೇಶದಿಂದ ಉಳಿದ 11 ಸಾವಿರ ಎಕರೆ ಪ್ರದೇಶವೂ ಒತ್ತುವರಿ ಆಗಲಿದೆ. ಹೀಗಾಗಿ ಜಿಲ್ಲಾಧಿಕಾರಿ ಆದೇಶವನ್ನು ರದ್ದುಗೊಳಿಸಲು ಒತ್ತಾಯಿಸಿದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.
ಬಂಡೀಪುರ ಬಳಿ ದುಡ್ಡು ಕೊಟ್ಟು ನಾನು ಜಮೀನು ಖರೀದಿಸಿದ್ದೇನೆ. ಈ ವಿಚಾರದಲ್ಲಿ ಹೈಕೋರ್ಟ್ ಸಹ ನನ್ನ ಪರವಾಗಿ ಆದೇಶ ನೀಡಿದೆ. ನಾನು ಅಕ್ರಮವಾಗಿ ಜಮೀನು ಖರೀದಿಸಿದ್ದರೆ ಸರ್ಕಾರ ವಶಪಡಿಸಿಕೊಳ್ಳಲಿ ಎಂದರು.

'ಕುರ್ಕಾಲ್ ಸಾಹಿತ್ಯ ಪ್ರಶಸ್ತಿ' ಪ್ರದಾನ
ಲಕ್ಷ್ಮಿಛಾಯ ವಿಚಾರ ವೇದಿಕೆ ವತಿಯಿಂದ ಕಾಸರಗೋಡು ಪೆರಡಾಲ ಕವಿತಾ ಕುಟೀರದಲ್ಲಿ ಕರ್ನಾಟಕ ಏಕೀಕರಣದ ಹೋರಾಟಗಾರ ಡಾ. ಕಯ್ಯಾರ ಕಿಂಞಣ್ಣ ರೈ ಅವರಿಗೆ 'ಜಯಂತಿ ಬಿ.ಎಸ್. ಕುರ್ಕಾಲ್ ಸಾಹಿತ್ಯ ಪ್ರಶಸ್ತಿ' ನೀಡಿ ಗೌರವಿಸಲಾಯಿತು. ಹಿರಿಯ ಸಾಹಿತಿ ಏರ್ಯ ಲಕ್ಷ್ಮಿನಾರಾಯಣ ಆಳ್ವ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಶಾಸಕಿ ಶಕುಂತಳಾ ಶೆಟ್ಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.