ಮೈಸೂರು

ಅಯೋಡಿನ್ ಕೊರತೆಯಾದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತ

Published On :

ಕ.ಪ್ರ.ವಾರ್ತೆ ,  ಮೈಸೂರು ,  ಅ. 26
ಅಯೋಡಿನ್ ಕೊರತೆ ಉಂಟಾದರೆ ಮಕ್ಕಳ ಸಮಗ್ರ ಬೆಳವಣಿಗೆ ಕುಂಠಿತವಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಂ. ಮಾಲೇಗೌಡ ಹೇಳಿದರು.
ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಂಯುಕ್ತಾಶ್ರಯದಲ್ಲಿ ರಾಜೇಂದ್ರನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಏರ್ಪಡಿಸಿದ್ದ ವಿಶ್ವ ಅಯೋಡಿನ್ ಕೊರತೆಯ ನಿಯಂತ್ರಣ ದಿನ ಮತ್ತು ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.
ಆಹಾರ ಪದಾರ್ಥದಲ್ಲಿ ಸೇವಿಸುವ ಉಪ್ಪಿನಲ್ಲಿ ಅಯೋಡಿನ್ ಕೊರತೆಯಾದರೆ ಹುಟ್ಟುವ ಮಕ್ಕಳಲ್ಲಿ ಬುದ್ಧಿಮಾಂದ್ಯತೆ ಹಾಗೂ ಕಿವುಡತನ ಉಂಟಾಗಲಿದೆ. ಅಲ್ಲದೆ ಮಕ್ಕಳ ಶರೀರದ ಅಂಗಾಂಗಗಳ ಬೆಳವಣಿಗೆಯು ಸಹ ವ್ಯತಿರಿಕ್ತವಾಗಲಿದೆ. ಥೈರಾಯ್ಡ್ ಸಮಸ್ಯೆಗೂ ಇದು ಕಾರಣವಾಗಲಿದೆ. ಆದ್ದರಿಂದ ಸಮರ್ಪಕವಾಗಿ ಅಯೋಡಿನ್‌ಯುಕ್ತ ಉಪ್ಪು ಸೇವಿಸಬೇಕು ಎಂದರು.
ಗರ್ಭಣಿಯರಲ್ಲಿ ಅಯೋಡಿನ್ ಕೊರತೆ ಉಂಟಾದರೆ ಗರ್ಭಪಾತ ಆಗುವುದು, ಬಹುಬೇಗ ಹೆರಿಗೆಯಾಗುವುದು, ಕಡಿಮೆ ತೂಕದ ಮಕ್ಕಳು ಹುಟ್ಟುವುದು ಹಾಗೂ ಚಲನಶೀಲತೆ ರಹಿತ ಅನಾರೋಗ್ಯವಂತ ಮಕ್ಕಳು ಜನಿಸುವರು. ಆದ್ದರಿಂದ ಪ್ರತಿದಿನ 15- 20 ಮಿಲಿಗ್ರಾಂ ಅಯೋಡಿನ್ ಸೇವಿಸುವುದು ಅವಶ್ಯಕ ಎಂದು ತಿಳಿಸಿದರು.
ಕಠಿಣ ಕ್ರಮ: ಪ್ರತಿಹಳ್ಳಿಯ ಮನೆ ಮನೆಗೆ ತೆರಳಿ ಅಯೋಡಿನ್ ಉಪ್ಪು ಬಳಕೆ ಬಗೆಗೆ ಆರೋಗ್ಯ ಕಾರ್ಯಕರ್ತರು ಮಾಹಿತಿ ನೀಡುವರು ಹಾಗೂ ಬಳಸುವ ಉಪ್ಪು ಪರಿಶೀಲಿಸುವರು. ಅಯೋಡಿನ್ ರಹಿತ ಉಪ್ಪು ಖರೀದಿಸಿರುವುದು ಕಂಡುಬಂದರೆ, ಅಂತಹ ಉಪ್ಪು ಮಾರಿದವರಿಗೆ ಆಹಾರ ಸುರಕ್ಷತೆ ಅಧಿಕಾರಿಗಳ ಮೂಲಕ ನೋಟಿಸ್ ಜಾರಿ ಮಾಡಿ ಕಠಿಣ ಕ್ರಮ ವಹಿಸಲಾಗುವುದು ಎಂದರು.
ಅಯೋಡಿನ್ ಉಪ್ಪು ಮಾರಾಟ ಪ್ರಕರಣಗಳು ಕಂಡುಬಂದರೆ ಸಾರ್ವಜನಿಕರು ಆರೋಗ್ಯ ಇಲಾಖೆಯ ಗಮನಕ್ಕೆ ತರಬೇಕು. ಇಂತಹ ಅರಿವು ಕಾರ್ಯಕ್ರಮಗಳನ್ನು ಕೇವಲ ಒಂದು ದಿನ ಅಥವಾ ಒಂದು ವಾರ ಆಚರಿಸಿದರೆ ಸಾಲದು, ವರ್ಷಪೂರ್ತಿ ನಡೆಯಬೇಕು ಹಾಗೂ ಈ ಬಗ್ಗೆ ಸಾರ್ವಜನಿಕರು ಗಮನ ಹರಿಸಿ ಆರೋಗ್ಯವಂತ ಸಮಾಜಕ್ಕೆ ಮುಂದಾಗಬೇಕು ಎಂದು ಆಶಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ, ವೈದ್ಯಾಧಿಕಾರಿಗಳಾದ ಡಾ.ರವಿ, ಡಾ.ಸಂಜನ, ಸ್ತ್ರೀಶಕ್ತಿ ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.