ಮೈಸೂರು

ಎಸ್‌ಜೆಸಿಇಯಲ್ಲಿ ಇನ್ಫೋತ್ಸವ್- ಐಟಿ ಹಬ್ಬ

Published On :

ಮೈಸೂರು: ಎಸ್‌ಜೆಸಿಇ ಮತ್ತು ಎಂಸಿಎ ಅಸೋಸಿಯೇಷನ್ ಸಂಯುಕ್ತವಾಗಿ ಆಯೋಜಿಸಿದ್ದ ಇನ್ಫೋತ್ಸವ್- 2013 ಎಂಬ ರಾಷ್ಟ್ರ ಮಟ್ಟದ ಅಂತರ ಕಾಲೇಜು ಐಟಿ ಹಬ್ಬವನ್ನು ಬೆಂಗಳೂರಿನ ತಲಿಸ್ಮಾ ಕಾರ್ಪೋರೇಷನ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಸಿ. ಮೃತ್ಯುಂಜಯಪ್ಪ ಭಾನುವಾರ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಎಂಸಿಎ ಪದವಿ ಪಡೆಯಲು ವಿದ್ಯಾರ್ಥಿಗಳು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳು ತಮ್ಮ ಸಂವಹನ ಮತ್ತು ನಾಯಕತ್ವ ಕೌಶಲ ವೃದ್ಧಿಸಿಕೊಳ್ಳಬೇಕು. ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಲು ನೈತಿಕ ಮೌಲ್ಯಗಳ ಕುಸಿತವೇ ಪ್ರಮುಖ ಕಾರಣ. ನೈತಿಕತೆ ನಮ್ಮ ಜೀವನದಲ್ಲಿ ಮುಖ್ಯವಾಗಬೇಕು. ದೇಶದಲ್ಲಿ ನೈತಿಕತೆ ಮಾಯವಾಗುತ್ತಿರುವ ಪರಿಣಾಮ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಶಿಸ್ತು, ಪರಿಶ್ರಮವಿದ್ದರೆ ಯಶಸ್ಸು ಸಾಧಿಸಬಹುದು ಎಂದು ಅವರು ಹೇಳಿದರು.
ಈ ಇನ್ಫೋತ್ಸವದಲ್ಲಿ ಬೆಂಗಳೂರಿನ ಪಿಇಎಸ್‌ಟಿ ಕಾಲೇಜು, ಮಂಡ್ಯದ ಪಿಇಎಸ್ ಕಾಲೇಜು, ಮೈಸೂರಿನ ಎನ್‌ಐಇ, ಎಂಐಟಿ, ಅಮೃತ, ಮಹಾಜನ, ಮಂಗಳೂರಿನ ಸೆಂಟ್ ಅಲೋಶಿಯಸ್ ಕಾಲೇಜುಗಳ ಎಂಸಿಎ ವಿಭಾಗದ 70 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಎಸ್‌ಜೆಸಿಇ ಪ್ರಾಂಶುಪಾಲ ಡಾ. ಬಿ.ಜಿ. ಸಂಗಮೇಶ್ವರ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಡಾ. ಸೈಯದ್ ಶಕೀಬ್ ಉರ್ ರೆಹಮಾನ್, ಎಂಸಿಎ ವಿಭಾಗದ ಮುಖ್ಯಸ್ಥೆ ಹಾಗೂ ಸಂಘದ ಅಧ್ಯಕ್ಷೆ ಡಾ. ಎಂ.ಪಿ. ಪುಷ್ಪಲತಾ, ಪ್ರಧಾನ ಕಾರ್ಯದರ್ಶಿ ಆರ್. ರಾಜಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.