ಮೈಸೂರು

ಆದಿವಾಸಿಗಳ ಸಮಸ್ಯೆ ಪರಿಹಾರಕ್ಕೆ ಆಗ್ರಹ

Published On :

ಮೈಸೂರು: ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಆದಿವಾಸಿಗಳ ಸಮಸ್ಯೆಯನ್ನು ಪರಿಹರಿಸುವಂತೆ ಮುಖಂಡರು ಆಗ್ರಹಿಸಿದರು.
ಈ ಉದ್ಯಾನವನದಲ್ಲಿ ಕಾಡು ಪ್ರಾಣಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಂಚಿನ ಗ್ರಾಮಗಳು ಹಾಗೂ ಹಾಡಿಗಳ ಜನರ ಜೀವನ ದುಸ್ತರವಾಗಿದೆ ಎಂದು ಹುಣಸೂರು ತಾಲೂಕಿನ ಚೇಣಿಹಡ್ಲು ಹಾಡಿ ಮುಖಂಡ ಪಿ.ಎಸ್. ಪುಟ್ಟಸ್ವಾಮಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಪ್ರತಿದಿನ ಕಾಡು ಪ್ರಾಣಿಗಳ ಭಯದಲ್ಲಿ ಬದುಕುವಂತಾಗಿದ್ದು, ಇತ್ತೀಚೆಗೆ ಇಬ್ಬರು ಗಿರಿಜನರು ಕಾಡಾನೆ ದಾಳಿಗೆ ಸಾವಿಗೀಡಾದರು. ಮರದ ಮೇಲೆ ಮಲಗುವಂಥ ಪರಿಸ್ಥಿತಿ ಎದುರಾಗಿದೆ. ಮಕ್ಕಳು ಶಿಕ್ಷಣ ಹಾಗೂ ಉದ್ಯೋಗದಿಂದ ವಂಚಿತರಾಗಿದ್ದಾರೆ. ವೈದ್ಯಕೀಯ ಸೌಲಭ್ಯ ಕಾಣದಾಗಿದೆ. ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜವಾಗಿಲ್ಲ ಎಂದರು.
ಆದಿವಾಸಿಗಳನ್ನು ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸುವ ಸಲುವಾಗಿ ಮೈಸೂರು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಪುನರ್ವಸತಿ ಸಮಿತಿಯು ಹುಣಸೂರಿನ ಹೆಬ್ಬಳ್ಳದಲ್ಲಿ 130 ಮನೆಗಳನ್ನು ನಿರ್ಮಿಸಿ ಈಗಾಗಲೇ ಆ ಮನೆಗಳನ್ನು ಸಮಿತಿಗೆ ಹಸ್ತಾಂತರಿಸಿದೆ. ಆದರೆ ಒಂದು ವರ್ಷವಾಗಿದ್ದರೂ ನೀರು, ವಿದ್ಯುತ್ ಮತ್ತಿತರ ಸೌಲಭ್ಯ ಕಲ್ಪಿಸಿಲ್ಲ ಎಂದರು. 2010ರಲ್ಲಿ ನಾಗರಹೊಳೆ ಅರಣ್ಯ ವಲಯದ ಕೋಂಡಿಗೆ ಹಾಡಿಯಿಂದ 13 ಕುಟುಂಬಗಳು ಸ್ಥಳಾಂತರಗೊಳಿಸುವ ಸಂದರ್ಭದಲ್ಲಿ ಸರ್ಕಾರದ ಈ ಕಾರ್ಯಕ್ರಮವನ್ನು ಕೆಲ ಸಂಘಟನೆಗಳು ವಿರೋಧಿಸಿ ತಡೆಯೊಡ್ಡಿದವು. ಈ ಬಾರಿ ಸಹ ಸ್ಥಳಾಂತರ ಕಾರ್ಯಕ್ರಮದಲ್ಲಿ ಅನಗತ್ಯ ವಿವಾದ ಸೃಷ್ಟಿಸುವ ಸಾಧ್ಯತೆಗಳಿವೆ. ಆದ್ದರಿಂದ ಪುನರ್ವಸತಿ ಕುಟುಂಬಗಳಿಗೆ ರಕ್ಷಣೆ ಒದಗಿಸಬೇಕು ಎಂದು ಅವರು  ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.