ಆಸ್ತಿ ತೆರಿಗೆ ದರ ಪರಿಷ್ಕರಣೆ ಮುಂದಕ್ಕೆ
ಮೈಸೂರು: ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸ್ಥಿರಾಸ್ತಿಗಳ ಮೇಲಿನ ತೆರಿಗೆ ದರವನ್ನು ಹೆಚ್ಚಿಸಬೇಕು ಎಂಬ ಪ್ರಸ್ತಾವನೆಯನ್ನು ಸೋಮವಾರ ನಡೆದ ಸಭೆ ತಿರಸ್ಕರಿಸಲಾಯಿತು. ಪ್ರತಿ ಮೂರು ವರ್ಷಗಳಿಗೊಮ್ಮೆ ಸ್ಥಿರಾಸ್ತಿ ಮೇಲಿನ ತೆರಿಗೆಯನ್ನು ಶೇ.15ರಷ್ಟು ಹೆಚ್ಚಿಸಬೇಕು ಎಂಬ ನಿಯಮದನ್ವಯ ತೆರಿಗೆ ಹೆಚ್ಚಳಕ್ಕೆ ದರ ನಿಗದಿಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಆದರೆ ಈ ಬಗ್ಗೆ ಚರ್ಚಿಸಿದ ಸದಸ್ಯರು ಸರಿಯಾದ ಮಾಹಿತಿ ಇಲ್ಲದ ಕಾರಣ ಮತ್ತೊಮ್ಮೆ ಪರಿಷ್ಕರಿಸಿ ಮುಂದಿನ ಸಭೆಯಲ್ಲಿ ವಿಷಯ ಮಂಡಿಸುವಂತೆ ಸೂಚಿಸಿದರು.
ಮಾಜಿ ಸೈನಿಕರು ಹಾಗೂ ಅವರ ಕುಟುಂಬ ವರ್ಗದವರ ಆಸ್ತಿಗಳಿಗೆ ತೆರಿಗೆಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಬೇಕು ಎಂಬ ವಿಷಯವನ್ನೂ ಸಹ ಸೂಕ್ತ ಮಾಹಿತಿಗಾಗಿ ಹಿಂದಕ್ಕೆ ಕಳುಹಿಸಲಾಗಿದೆ.
ತೆರಿಗೆ ವಿಧಿಸಿರುವುದು ಅವೈಜ್ಞಾನಿಕವಾಗಿದೆ. ಅಲ್ಲದೆ ಸರಿಯಾದ ಮಾಹಿತಿಯನ್ನು ಒಳಗೊಂಡಿಲ್ಲ ಎಂಬ ಕಾರಣಕ್ಕೆ ತಿರಸ್ಕರಿಸಲಾಗಿದೆ. ಪಾಲಿಕೆ ವ್ಯಾಪ್ತಿಯ ಸ್ಥಿರ ಆಸ್ತಿಗಳ ದಾಖಲೆಗಳನ್ನು ಕ್ರಮಬದ್ಧವಾಗಿ ನಿರ್ವಹಿಸಿ ಸಂರಕ್ಷಿಸಲು ಒಂದು ವರ್ಷದ ಅವಧಿಗೆ ಕೆ. ವೆಂಕಟೇಶನ್ ಅವರನ್ನು ಭೂಮಾಪಕರಾಗಿ ನೇಮಿಸಿಕೊಳ್ಳಲು ಸಹ ಸಭೆ ತೀರ್ಮಾನಿಸಿತು.
ವಿಷಾದಿಸಿದ ಮಂಜುಳಾ ಮಾನಸ
ಮೇಯರ್ ಮತ್ತು ಆಯುಕ್ತರಿಗೆ ಸರಿಯಾದ ತಿಳಿವಳಿಕೆ ಇಲ್ಲ ಎಂದು ತಮ್ಮ ಮಾತಿನ ಭರದಲ್ಲಿ ಹೇಳಿದ ಸದಸ್ಯ ಮಂಜುಳಾ ಮಾನಸ ಅವರು ಸಭೆಯ ಕ್ಷಮೆ ಕೋರಬೇಕು. ಅವರ ಹೇಳಿಕೆಯನ್ನು ಕಡತದಿಂದ ತೆಗೆಸಬೇಕು ಎಂದು ಆಡಳಿತ ಪಕ್ಷದ ಸದಸ್ಯರು ಪಟ್ಟು ಹಿಡಿದರು. ಈ ವೇಳೆ ಸ್ಪಷ್ಟನೆ ನೀಡಿದ ಮಂಜುಳಾ ಮಾನಸ ಅವರು, ಮೇಯರ್ ಅವರಿಗೆ ಅಧಿಕಾರಿಗಳು ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂಬ ನನ್ನ ಹೇಳಿಕೆಯನ್ನು ಹಲವರು ತಪ್ಪಾಗಿ ಅರ್ಥೈಸಿಕೊಂಡು ಕ್ಷಮೆ ಕೋರಬೇಕು ಎಂದು ಪಟ್ಟು ಹಿಡಿದಿದ್ದಾರೆ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುವುದಾಗಿ ಹೇಳಿದರು.
ಮನ್ನಾ ಡೇಗೆ ಶ್ರದ್ಧಾಂಜಲಿ
ಗಾಯಕ ಮನ್ನಾ ಡೇ ಅವರಿಗೆ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಆರಂಭದಲ್ಲಿ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ಬಿಜೆಪಿಯ ಎಂ.ಕೆ. ಶಂಕರ್ ಸೇರಿದಂತೆ ಹಲವರು ಮೇಯರ್ ಅವರಿಗೆ ತಿಳಿಸಿದ್ದರಾದರೂ ಸಭೆಯ ಮಧ್ಯೆ ಶ್ರದ್ಧಾಂಜಲಿ ಕೋರಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

