ಮೈಸೂರು

ಭ್ರಷ್ಟಾಚಾರ ನಿರ್ಮೂಲನೆ ನಾಗರಿಕರ ಕರ್ತವ್ಯ: ಡಾ. ಸಲೀಂ

Published On :

ಕ.ಪ್ರ.ವಾರ್ತೆ    ಮೈಸೂರು    ಅ. 28
ಭ್ರಷ್ಟಾಚಾರ ನಿರ್ಮೂಲನೆ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ ಎಂದು ಪೊಲೀಸ್ ಆಯುಕ್ತ ಡಾ. ಎಂ.ಎ. ಸಲೀಂ ಹೇಳಿದರು.
ಕೆನರಾ ಬ್ಯಾಂಕ್ ವೃತ್ತ ಕಚೇರಿಯಲ್ಲಿ ಆಯೋಜಿಸಿರುವ ಜಾಗೃತ ಸಪ್ತಾಹ ಆಚರಣೆಯಲ್ಲಿ ಸೋಮವಾರ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಸಮಾಜದಲ್ಲಿ ವ್ಯಾಪಿಸಿರುವ ಭ್ರಷ್ಟಚಾರ ನಿರ್ಮೂಲನೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದ್ದು, ತಾನು ಪ್ರಾಮಾಣಿಕನಾಗಿ ಉಳಿಯುವುದಲ್ಲದೆ ಇತರರ ಭ್ರಷ್ಟಾಚಾರಗಳನ್ನು ಗಮನಕ್ಕೆ ತರುವುದು ಕೂಡ ಅಷ್ಟೇ ಪ್ರಾಮಾಣಿಕವಾಗಿ ಮಾಡಬೇಕಾದ ಅಗತ್ಯವಿದೆ. ಜಾಗೃತ ಸಪ್ತಾಹ ಕೇವಲ ಆರಂಭವಾಗಿದ್ದು, ಇದನ್ನು ಆಂದೋಲನ ರೂಪದಲ್ಲಿ ತೆಗೆದುಕೊಂಡು ಹೋದಲ್ಲಿ ಸಮಾಜವನ್ನು ಭ್ರಷ್ಟಮುಕ್ತವಾಗಿಮಾಡಬಹುದು ಎಂದರು.
ಕೆನರಾ ಬ್ಯಾಂಕ್ ತನ್ನ ನಿಸ್ವಾರ್ಥ ಸೇವೆಯಿಂದ ಈ ಬ್ಯಾಂಕ್ ಇಂದು ಗ್ರಾಹಕ ಸ್ನೇಹಿ ಬ್ಯಾಂಕಾಗಿ ದೇಶದಾದ್ಯಂತ ಬೆಳೆದಿದ್ದು, ಎಲ್ಲಾ ವರ್ಗದ ಎಳಿಗೆಗೆ ದುಡಿಯುತ್ತಿದೆ ಎಂದು ಪ್ರಶಂಸಿಸಿದರು.
ಕೆನರಾ ಬ್ಯಾಂಕ್ ಡಿಜಿಎಂ ಡಾ. ಎಸ್.ಟಿ. ರಾಮಚಂದ್ರ ಮಾತನಾಡಿ, ಕೆನರಾ ಬ್ಯಾಂಕ್ ಸೇರಿದಂತೆ ಬ್ಯಾಂಕಿಂಗ್ ಕ್ಷೇತ್ರವು ತನ್ನ ವ್ಯವಹಾರಗಳಲ್ಲಿ ಶುದ್ಧತೆಯನ್ನು ಕಾಪಾಡಿಕೊಂಡು ಬಂದಿದ್ದು, ಸಾರ್ವಜನಿಕರ ಗೌರವಕ್ಕೆ ಪಾತ್ರವಾಗಿದೆ ಎಂದ ಅವರು, ಭ್ರಷ್ಟಾಚಾರ ನಿರ್ಮೂಲನೆಗಾಗಿ ಪ್ರತಿ ಸಿಬ್ಬಂದಿಯು ಅವಿರತ ಶ್ರಮ ವಹಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.