ಯಶಸ್ವಿನಿ ಸದಸ್ಯತ್ವದಿಂದ ಆರೋಗ್ಯ ಸೌಲಭ್ಯ
ಕ.ಪ್ರ.ವಾರ್ತೆ ಹುಣಸೂರು ಅ. 28
ಜನತೆ ಸಹಕಾರ ಸಂಘಗಳ ಮೂಲಕ ಕಡ್ಡಾಯವಾಗಿ ಯಶಸ್ವಿನಿ ಯೋಜನೆಯ ಸದಸ್ಯತ್ವ ಪಡೆದು ಉಚಿತ ಆರೋಗ್ಯ ಸೇವೆಯ ಸೌಲಭ್ಯ ಪಡೆದುಕೊಳ್ಳುವಂತೆ ಶಾಸಕ ಎಚ್.ಪಿ. ಮಂಜುನಾಥ್ ಮನವಿ ಮಾಡಿದರು.
ಪಟ್ಟಣದ ಮಹಿಳಾ ಪದವಿ ಕಾಲೇಜಿನಲ್ಲಿ ಮೈಸೂರಿನ ವಿದ್ಯಾರಣ್ಯ ಆಸ್ಪತ್ರೆ ವತಿಯಿಂದ ಏರ್ಪಡಿಸಿದ್ದ ಮೂಳೆ ಮತ್ತು ಕೀಲಿನ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ ಅವರು, ತಾಲೂಕಿನ ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ಇಂತಹ ಶಿಬಿರವನ್ನು ನಡೆಸಲಾಗುವುದು. ಉಚಿತ ಸೇವೆ ನೀಡುತ್ತಿರುವ ಮೈಸೂರಿನ ವಿದ್ಯಾರಣ್ಯ ಆಸ್ಪತ್ರೆಯ ಕಾರ್ಯ ಶ್ಲಾಘನೀಯ ಎಂದರು.
ವಿದ್ಯಾರಣ್ಯ ಆಸ್ಪತ್ರೆಯ ವೈದ್ಯರಾದ ಡಾ. ಮಂಜುನಾಥ್, ಡಾ. ರವೀಂದ್ರನಾಥ್, ಡಾ. ವಿಜಯಕುಮಾರಿ ನೇತೃತ್ವದಲ್ಲಿ ನಡೆದ ತಪಾಸಣೆ ಶಿಬಿರದಲ್ಲಿ 450ಕ್ಕೂ ಹೆಚ್ಚು ಮಂದಿ ತಪಾಸಣೆಗೊಳಗಾದರು. ಮೂಳೆ ಸಂಬಂಧದ ವಿವಿಧ ಕಾಯಿಲೆಯುಳ್ಳ 52 ಮಂದಿಯನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು, ಉಚಿತ ಔಷಧ ವಿತರಿಸಲಾಯಿತು.ಆಸ್ಪತ್ರೆಯ ಮುಖ್ಯಸ್ಥ ಡಾ. ಮಂಜುನಾಥ್, ಪಿಆರ್ಒ ರಾಜೀವ್, ಜಯಸ್ವಾಮಿ, ನಂಜುಂಡಸ್ವಾಮಿ, ಸ್ನೇಹಜೀವಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಆರ್. ಆನಂದ್, ಪುರಸಭಾ ಸದಸ್ಯರಾದ ಸುನಿತಾ ಜಯರಾಮೇಗೌಡ, ಯೋಗಾನಂದ, ರವಿಕುಮಾರ್, ಮಾಜಿ ಉಪಾಧ್ಯಕ್ಷ ಎಸ್. ಜಯರಾಂ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

