ಮೈಸೂರು

ಲೋಕಸಭೆಗೆ ದೇಶ- ಕುಟುಂಬದ ಚುನಾವಣೆ

Published On :

ಕ.ಪ್ರ.ವಾರ್ತೆ    ಪಿರಿಯಾಪಟ್ಟಣ    ಅ. 28
ಮುಂಬರಲಿರುವ ಲೋಕಸಭಾ ಚುನಾವಣೆ ದೇಶ ಹಾಗೂ ಒಂದು ಕುಟುಂಬದ ಮಧ್ಯೆ ನಡೆಯುವ ಚುನಾವಣೆಯಾಗಲಿದೆ ಎಂದು ಮಾಜಿ ಸಚಿವ ಎಸ್.ಎ. ರಾಮದಾಸ್ ಹೇಳಿದರು.
ಪಟ್ಟಣದ ಸಾಯಿ ಸಮುದಾಯ ಭವನದಲ್ಲಿ ಸೋಮವಾರ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿ ಅವರು, ದೇಶದ ಇತಿಹಾಸದಲ್ಲಿ 67 ವರ್ಷಗಳ ನಂತರ ಮುಂದೆ ನಡೆಯುವ ಲೋಕಸಭಾ ಚುನಾವಣೆ ವಿಶಿಷ್ಟವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸ್ವಯಂಕೃತ ಅಪರಾಧದಲ್ಲಿ ಸೋಲುಂಟಾಗಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಎಲ್ಲಾ ಬಣಗಳು ಒಂದಾಗಿ ಹೋರಾಡಲಿದ್ದು, ದೇಶದಲ್ಲೊ ಮೋದಿ ಗಾಳಿ ಬೀಸುತ್ತಿದ್ದು ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
 ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದು ಹೋದ ನಂತರ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗಲಿದ್ದು, ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲಿ 22 ಸ್ಥಾನಗಳನ್ನು ಬಿಜೆಪಿ ಪಕ್ಷ ಪಡೆಯಲಿದೆ ಎಂದು ತಿಳಿಸಿದರು.
ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಕಳೆದ 55 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಬಡತನ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತಿಲ್ಲ. ಬದಲಿಗೆ ಕಾಂಗ್ರೆಸ್ ಪಕ್ಷ ದ್ವೇಷದ ರಾಜಕಾರಣ ಮಾಡಿಕೊಂಡು ಜಾತಿ- ಜಾತಿ ಮಧ್ಯೆ ಸಂಘರ್ಷ ಉಂಟಾಗುವಂತೆ ಮಾಡಿ, ಮತದಾರರನ್ನು ವಂಚಿಸಿ ಪ್ರತಿ ಬಾರಿ ಮತ ಪಡೆಯುತ್ತಿದೆ ಎಂದು ದೂರಿದರು.
ವಿಧಾನ ಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್, ತಾ. ಬಿಜೆಪಿ ಅಧ್ಯಕ್ಷ ಆರ್.ಟಿ. ಸತೀಶ್, ಮುಖಂಡರಾದ ಚಂದ್ರಶೇಖರ್, ರಾಜೇಗೌಡ, ಮೈ.ವಿ. ರವಿಶಂಕರ್, ಪುಟ್ಟಸ್ವಾಮಿ, ಕೃಷ್ಣೇಗೌಡ, ಲೋಕಪಾಲಯ್ಯ, ವಿಕ್ರಂರಾಜ್, ಪಿ.ಜೆ. ರವಿ, ಟಿ. ರಮೇಶ್, ಆನಂದ್, ಲಲಿತ, ಪಿ.ವಿ. ಬಸವರಾಜಪ್ಪ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.