ಕೆಎಂಎಫ್ ಅಧಿಕಾರಿಗಳಿಗೆ ವಿಶೇಷ ಕಾರ್ಯಕ್ರಮ
ಕ.ಪ್ರ.ವಾರ್ತೆ ಮೈಸೂರು ಅ. 29
ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆಯಲ್ಲಿ ಕೆಎಂಎಫ್ ಅಧಿಕಾರಿಗಳಿಗೆ ಮೌಲ್ಯಗಳ ಮೂಲಕ ಪಾತ್ರ ಮತ್ತು ಜವಾಬ್ದಾರಿಗಳ ಜ್ಞಾನಾರ್ಜನೆ ಕುರಿತ 3 ದಿನಗಳ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕ ಡಾ. ಎ.ಎಸ್. ಪ್ರೇಮನಾಥ್ ಅವರು ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಪದೋನ್ನತಿ ಹೊಂದಿದ ಅಧಿಕಾರಿಗಳು ಪದೋನ್ನತಿಗೆ ಮುಂಚೆ ವಿವಿಧ ವಿಭಾಗಗಳಲ್ಲಿ ಅನುಭವ ಪಡೆದಿರುವ ಅಧಿಕಾರಿಗಳು ಜಾಗತಿಕ ಮಟ್ಟದಲ್ಲಿ ನಂದಿನಿ ಉತ್ಪನ್ನಗಳ ಮಾರುಕಟ್ಟೆಗೆ ಇರುವ ಸವಾಲು ಎದುರಿಸಲು ಪ್ರತಿಯೊಬ್ಬರೂ ಚಿಂತನಶೀಲರಾಗಿ ಕಾರ್ಯಪ್ರವೃತ್ತರಾಗಲು ಇಂತಹ ಶಿಬಿರ ಅನುಕೂಲವಾಗುವುದರಿಂದ, ಇದನ್ನು ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿರುವುದಾಗಿ ತಿಳಿಸಿದರು.
ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದ ಕೆಎಂಎಫ್ ತರಬೇತಿ ಕೇಂದ್ರದ ಜಂಟಿ ನಿರ್ದೇಶಕ ಡಾ. ವಿ.ವಿ. ಕುಮಾರ್ ಹಾಗೂ ತಂಡವನ್ನು ಅಭಿನಂದಿಸಿದರು.
ಕಾರ್ಯಕ್ರಮಕ್ಕೆ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಮಹೇಶಾತ್ಮಾನಂದಜೀ ಸ್ವಾಮಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು ಹಾಗೂ ಮೈಮುಲ್ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಸುರೆಶ್ ಬಾಬು ಶುಭ ಕೋರಿದರು.
ಬೆಳಗಾವಿ ಹಾಲು ಒಕ್ಕೂಟದ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಡಿ.ಎನ್. ಹೆಗ್ಡೆ ಅವರು ಅಭ್ಯರ್ಥಿಗಳ ಪರ ಮಂಡಿಸಿದರು. ಸಹಕಾರ ಇಲಾಖೆಯ ನಿವೃತ್ತ ಹೆಚ್ಚುವರಿ ನಿಬಂಧಕ ಸಿ.ಎನ್. ಪರಶಿವಮೂರ್ತಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮೈಮುಲ್ ವ್ಯವಸ್ಥಾಪಕ ರಾಜಶೇಖರಮೂರ್ತಿ ನಿರೂಪಿಸಿದರು. ಕೇಂದ್ರದ ಜಂಟಿ ನಿರ್ದೇಶಕ ಡಾ. ವಿ.ವಿ. ಕುಮಾರ್ ಅತಿಥಿಗಳನ್ನು ಪರಿಚಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

