ಮೈಸೂರು

ಸಕಾಲಕ್ಕೆ 200 ಸೇವೆಗಳ ಸೇರ್ಪಡೆ

Published On :

ಮೈಸೂರು: ಸಕಾಲ ಯೋಜನೆಗೆ ಹೆಚ್ಚುವರಿಯಾಗಿ ಇನ್ನೂ 200 ಸೇವೆಗಳನ್ನು ಸೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ(ಡಿಪಿಎಆರ್) ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹೇಳಿದರು. ಮೈಸೂರಿನ ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ಬುಧವಾರ ನಡೆದ ಸಕಾಲ ಯೋಜನೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳು 6 ಕೋಟಿ ಜನರಿಗೆ 1800ಕ್ಕೂ ಹೆಚ್ಚಿನ ಸೇವೆಗಳನ್ನು ಒದಗಿಸುತ್ತಿದೆ. ಹಂತ ಹಂತವಾಗಿ ಸಕಾಲ ಯೋಜನೆಗೆ ಸೇವೆಗಳನ್ನು ಸೇರಿಸಲಾಗುವುದು ಎಂದರು. ಪ್ರಸ್ತುತ ಸರ್ಕಾರದ 42 ಇಲಾಖೆಗಳು, ಸಂಸ್ಥೆಗಳ 419 ಸೇವೆಗಳನ್ನು ಸಕಾಲ ಯೋಜನೆಯಡಿ ನೀಡಲಾಗುತ್ತಿದೆ. ಈವರೆಗೂ 3.50 ಕೋಟಿ ಅರ್ಜಿಗಳು ಸಕಾಲದಲ್ಲಿ ಸ್ವೀಕೃತವಾಗಿದೆ. ನಿಗದಿತ ಅವಧಿಯೊಳಗೆ ಸೇವೆ ಒದಗಿಸದಿದ್ದರೆ ಅಂಥ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಪರಿಹಾರ ಕೇಳಬಹುದು. ಸಕಾಲ ಸಹಾಯವಾಣಿ- 080-4455 4455 ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಕರೆ ಮಾಡಿದರೆ 200 ದೂರವಾಣಿಗಳು ಸಂಪರ್ಕ ಸಿಗುತ್ತದೆ. ಸಂಬಂಧಪಟ್ಟ ಸೇವೆಗಳ ಬಗ್ಗೆ ಪ್ರಾಥಮಿಕ ಮಾಹಿತಿ ನೀಡುತ್ತಾರೆ. ಮಾಹಿತಿ ಇಲ್ಲದಿದ್ದಲ್ಲಿ ಸಂಬಂಧ ಪಟ್ಟ ಇಲಾಖೆಯಿಂದ ಮಾಹಿತಿ ಸಂಗ್ರಹಿಸಿ ವಾಪಸ್ ಕರೆ ಮಾಡಿ ಹೇಳುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.