ಐಒಬಿ ಪ್ರಾದೇಶಿಕ ಕಚೇರಿ ಉದ್ಘಾಟನೆ
ಕ.ಪ್ರ.ವಾರ್ತೆ ಮೈಸೂರು ಅ. 30
ಇಂಡಿಯನ್ ಓವರ್ಸೀಸ್ ಬ್ಯಾಂಕ್ ವತಿಯಿಂದ ನಗರದ ವಿನೋಬಾ ರಸ್ತೆಯಲ್ಲಿ ತೆರೆಯಲಾದ ಪ್ರಾದೇಶಿಕ ಕಚೇರಿಯನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸಿದರು.
ನಂತರ ನಡೆದ ಅಗ್ರಿ ಮೇಳದಲ್ಲಿ ನೂತನ ಕೃಷಿ ಸಾಲ ಕಾರ್ಯಕ್ರಮಗಳನ್ನು ಪ್ರಕಟಿಸಲಾಯಿತು. ಗ್ರಾಮೀಣ ಮಟ್ಟದಲ್ಲೂ ಐಒಬಿ ಶಾಖೆಗಳನ್ನು ಆರಂಭಿಸಿ ರೈತರು ಕೃಷಿ ಚಟುವಟಿಕೆ ನಡೆಸಲು ಅಗತ್ಯವಾದ ಸಾಲ ಸೌಲಭ್ಯ ಹಾಗೂ ಮರುಪಾವತಿ ಮುಂತಾದ ವಿಚಾರಗಳ ಬಗ್ಗೆ ಕೂಲಂಕುಷವಾಗಿ ತಿಳಿಸಿಕೊಡಲಾಯಿತು. ರೈತರಿಗಾಗಿ 5 ಕೋಟಿ ವರೆಗಿನ ಕೃಷಿ ಸಾಲವನ್ನು ವಿತರಿಸಲಾಯಿತು.
ಇದೇ ವೇಳೆ ಧರ್ಮಸ್ಥಳ ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಸಹೋದರ ಡಿ. ಸುರೇಂದ್ರಕುಮಾರ್, ಐಒಬಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಎಂ. ನರೇಂದ್ರ, ಹಿರಿಯ ಪ್ರಾದೇಶಿಕ ವ್ಯವಸ್ಥಾಪಕ ಎಸ್. ನರಸಿಂಹನ್, ಬೆಂಗಳೂರು ನ್ಯಾಷನಲ್ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ಸಿ.ಎಸ್. ವಸಂತಕುಮಾರ್ ಇದ್ದರು.
ಇದಕ್ಕೂ ಮೊದಲು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂಡಿ ಡಾ. ಎಂ. ನರೇಂದ್ರ, ಇಂಡಿಯನ್ ಓವರ್ಸೀಸ್ ಬ್ಯಾಂಕ್ 27 ರಾಜ್ಯಗಳಲ್ಲಿ 3000ಕ್ಕೂ ಅಧಿಕ ಶಾಖೆಗಳನ್ನು ಹೊಂದಿದೆ.
ಜಾಗತಿಕ ಮಟ್ಟದಲ್ಲಿ ವ್ಯವಹಾರದಲ್ಲಿ ಶೇ.82.88ರಷ್ಟು ಪ್ರಮಾಣದಲ್ಲಿ ವಹಿವಾಟು ನಡೆಸಿದ್ದು, 3,89,005 ಕೋಟಿಗೂ ಅಧಿಕ ರೀತಿಯಲ್ಲಿ ಹಣಕಾಸು ವ್ಯವಹಾರ ನಡೆಸಿದೆ. ಕರ್ನಾಟಕದಲ್ಲಿ 215 ಶಾಖೆಗಳನ್ನು ಹೊಂದಿದ್ದು, ಒಟ್ಟು 16,000 ಕೋಟಿಗಿಂತ ಹೆಚ್ಚು ವಹಿವಾಟು ನಡೆಸುತ್ತಿದೆ. ಮೈಸೂರು ವಲಯದಲ್ಲಿ 888 ಕೋಟಿ ವಹಿವಾಟು ನಡೆಸಿದ್ದು, ಕೇವಲ 29 ಶಾಖೆಗಳನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ಶಾಖೆಗಳ ಸಂಖ್ಯೆಯನ್ನು 50ಕ್ಕೆ ಹೆಚ್ಚಿಸುವ ಇರಾದೆ ಹೊಂದಿದ್ದು, ಗ್ರಾಮಾಂತರ ಪ್ರದೇಶಕ್ಕೆ ಬ್ಯಾಂಕಿಂಗ್ ಸೌಲಭ್ಯ ತಲುಪಿಸುವುದೇ ನಮ್ಮ ಗುರಿಯಾಗಿದೆ. ಸಣ್ಣ ಕೈಗಾರಿಕೆಗೆ 81 ಕೋಟಿ ಮೀಸಲಿಡಲಾಗಿದೆ. ಗ್ರಾಮೀಣಾಭಿವೃದ್ಧಿಗಾಗಿ ಐಓಬಿಯಿಂದ 500 ಮಂದಿಯನ್ನು ನಿಯೋಜಿಸಲಾಗಿದ್ದು, ಅವರು ರೈತರ ಮನೆ ಬಾಗಿಲಿಗೆ ತೆರಳಿ ಬ್ಯಾಂಕಿನ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವರು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

