'ಕೆ.ಆರ್. ಆಸ್ಪತ್ರೆ ಉನ್ನತೀಕರಣಕ್ಕೆ ಕ್ರಮ'
ಕ.ಪ್ರ.ವಾರ್ತೆ ಮೈಸೂರು ಅ. 30
ಚಾಮರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕೆ.ಆರ್. ಆಸ್ಪತ್ರೆ ಉನ್ನತೀಕರಣಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮನವಿ ಮಾಡಿದ್ದೇನೆ ಎಂದು ಶಾಸಕ ವಾಸು ಹೇಳಿದರು.
ಕನ್ನಡ ವೈದ್ಯ ಸಾಹಿತ್ಯ ಪರಿಷತ್ ವತಿಯಿಂದ ನಗರದ ಜೆ.ಕೆ. ಮೈದಾನದ ಅಮೃತ ಮಹೋತ್ಸವ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಎಚ್.ಟಿ. ಚಿದಾನಂದ ಅವರ ಚರ್ಬಿ ಊಟ ಹೃದಯ ಸ್ಫೋಟ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮೈಸೂರು ರಾಜರ ದೂರದೃಷ್ಟಿಯಿಂದ ಸ್ಥಾಪನೆಯಾದ ಕೆ.ಆರ್. ಆಸ್ಪತ್ರೆಗೆ ಅಕ್ಕಪಕ್ಕದ ನಾಲ್ಕೂ ಜಿಲ್ಲೆಗಳಿಂದ ಜನರು ಆಗಮಿಸುತ್ತಾರೆ. ಅವರಿಗೆ ವೈದ್ಯ ಚಿಕಿತ್ಸೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುವ ಕೆ.ಆರ್. ಆಸ್ಪತ್ರೆಯ ಇಂದಿನ ಸ್ಥಿತಿ ನೋಡಿದರೆ ನಮಗೆ ಬೇಸರವಾಗುತ್ತದೆ. ಆದ್ದರಿಂದ ಆಸ್ಪತ್ರೆಯ ಉನ್ನತೀಕರಣಕ್ಕೆ ಸರ್ಕಾರದೊಂದಿಗೆ ಮಾತನಾಡಿದ್ದೇನೆ. ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರೊಂದಿಗೂ ಮಾತನಾಡಿದ್ದು, ಕನಿಷ್ಠ 10 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಡಾ. ಎಚ್.ಟಿ. ಚಿದಾನಂದ ಅವರ ಚರ್ಬಿ ಊಟ ಹೃದಯ ಸ್ಫೋಟ ಕೃತಿಯು ಆರೋಗ್ಯದ ಬಗ್ಗೆ ಹಲವು ಅಂಶಗಳನ್ನು ಬಿತ್ತರಿಸಿದೆ. ಕೊಬ್ಬಿನಾಂಶ ತಿಂದವರು ತಾವು ಹೆಚ್ಚು ಕಾಲ ಬದುಕ್ಕಿದ್ದೇವೆ ಎನ್ನುತ್ತಾರೆ. ಆದರೆ, ವಾಸ್ತವ ಸ್ಥಿತಿ ನೆನಿಸಿಕೊಂಡರೆ ಭಯವಾಗುತ್ತದೆ.
ಅದರ ಬಗ್ಗೆ ಅರಿವು ಮೂಡಿಸಲು ಚಿದಾನಂದ ಅವರು ಈ ಕೃತಿ ಬರೆದಿದ್ದಾರೆ. ಈ ಬಗ್ಗೆ ಇನ್ನು ಹೆಚ್ಚಿನ ಸಂಶೋಧನೆಯ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ಇದೇ ವೇಳೆ ವರ್ಣಚಿತ್ರ ಕಾವ್ಯ ಪ್ರದರ್ಶನವನ್ನು ಮೈಸೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಡೀನ್ ಡಾ. ಎಚ್. ಹನುಮಂತಪ್ಪ ಉದ್ಘಾಟಿಸಿದರು. ಪತ್ರಿಕೋದ್ಯಮಿ ರಾಜಶೇಖರ ಕೋಟಿ, ಲೇಖಕ ಡಾ. ಎಚ್.ಟಿ. ಚಿದಾನಂದ, ಕನ್ನಡ ವೈದ್ಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ. ಶರತ್ಕುಮಾರ್, ಮೈಸೂರು ವಿವಿ ವೈದ್ಯಕೀಯ ವಿಶ್ವಕೋಶ ಸಮಿತಿ ಸದಸ್ಯ ಡಾ. ಎಂ.ಜಿ.ಆರ್. ಅರಸ್, ಜನತಾ ಬಜಾರ್ನ ಅಧ್ಯಕ್ಷ ಎಂ. ಚಂದ್ರಶೇಖರ್, ಪಾಲಿಕೆ ಮಾಜಿ ಸದಸ್ಯೆ ಟಿ. ಹೇಮಾವತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

