ಕಾಳೇನಹಳ್ಳಿಯಲ್ಲಿ ಕುಡಿವ ನೀರಿಗೆ ತತ್ವಾರ
ಕೆ.ಆರ್. ನಗರ: ಅಸರ್ಮಪಕ ವಿದ್ಯುತ್ ಪೂರೈಕೆಯಿಂದ ಪಟ್ಟಣದ ಸಮೀಪವಿರುವ ಕಾಳೇನಹಳ್ಳಿ ಮತ್ತು ಕೆಂಪನಕೊಪ್ಪಲು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ತಲೆದೂರಿದೆ.
ಇಂತಹ ವಿದ್ಯುತ್ ಅವಘಡಗಳಿಂದ ಗ್ರಾಮದಲ್ಲಿನ ರಾಜೀವ್ ಗಾಂಧಿ ಕುಡಿಯುವ ನೀರು ಸರಬರಾಜು ಯೋಜನೆ ಸ್ಥಗಿತಗೊಂಡಿದೆ. ಇದರಿಂದ ಕುಡಿಯುವ ನೀರಿಗಾಗಿ ಗ್ರಾಮದಲ್ಲಿರುವ ಒಂದೇ ಕೊಳವೆ ಬಾವಿಯನ್ನು ಆಶ್ರಯಿಸಬೇಕಾದ ಅನಿವಾರ್ಯ ಪರಿಸ್ಥಿತಿ ಜನತೆಗೆ ಬಂದೊದಗಿದೆ. ಈ ಗ್ರಾಮಗಳ ಸುಮಾರು 500ಕ್ಕೂ ಹೆಚ್ಚು ಜನರು ನಿತ್ಯ ಸರತಿಯಲ್ಲಿ ನಿಂತು ಕೊಳವೆ ಬಾವಿಯಿಂದ ನೀರು ಪಡೆಯುತ್ತಿದ್ದು ಸೆಸ್ಕ್ ಸಿಬ್ಬಂದಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.
ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಕೆ.ಆರ್. ನಗರದಲ್ಲಿರುವ ಸೆಸ್ಕ್ ಕಚೇರಿಗೆ ದೂರು ನೀಡಿದ್ದಾರೆ. ಆದರೆ, ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ನೀರಿನ ಜತೆಗೆ ರೈತರು ಸಾಲ ಮಾಡಿ ಕೊಳವೆ ಬಾವಿಗಳನ್ನು ಹಾಕಿಸಿದ್ದಾರೆ. ಈಗ ವಿದ್ಯುತ್ ಸಮಸ್ಯೆಯಿಂದ ಸಾಲ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.
4 ರಂದು ಪ್ರತಿಭಟನೆ: ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಹತ್ತಾರು ವರ್ಷಗಳ ವಿದ್ಯುತ್ ಸಮಸ್ಯೆಯಿಂದ ಬೇಸತ್ತಿರುವ ಗ್ರಾಮಸ್ಥರು ಕೆ.ಆರ್. ನಗರದ ಸೆಸ್ಕ್ ಕಚೇರಿ ಎದುರು ಸೆ.4 ರಂದು ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.
ಪೂರೀಗಾಲಿ ಕಾಲೇಜಿಗೆ ಶೇ. 96.55 ಫಲಿಶಾಂತ
ಟಿ. ನರಸೀಪುರ: ಕಳೆದ ಮೇ ಮತ್ತು ಜೂನ್ನಲ್ಲಿ ನಡೆದ ಅಂತಿಮ ಪದವಿ ಪರೀಕ್ಷೆಯಲ್ಲಿ ಪೂರೀಗಾಲಿ ಗ್ರಾಮದ ಪಿಎಲ್ಎನ್ ಪ್ರಥಮ ದರ್ಜೆ ಕಾಲೇಜಿಗೆ ಶೇ. 96.55 ರಷ್ಟು ಫಲಿತಾಂಶ ಬಂದಿದೆ. ಕಾಲೇಜಿನಲ್ಲಿ ಅಂತಿಮ ಬಿ.ಎ ಪದವಿ ಪರೀಕ್ಷೆಯನ್ನು ಬರೆದಿದ್ದ 58 ವಿದ್ಯಾರ್ಥಿಗಳ ಪೈಕಿ 56 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರಲ್ಲಿ ಮೂವರು ಅತ್ಯುನ್ನತ ದರ್ಜೆ, 29 ಪ್ರಥಮ, 10 ದ್ವಿತೀಯ ಹಾಗೂ 11 ತೃತೀಯ ದರ್ಜೆಯಲ್ಲಿ ತೇರ್ಗೆಡೆಯಾಗಿದ್ದಾರೆ. ವಿದ್ಯಾರ್ಥಿನಿಯರಾದ ಎಂ. ಸೌಮ್ಯ- ಶೇ. 83.88, ಆರ್. ಸೌಮ್ಯ ಶೇ. 83.22, ಎಂ. ರಮೇಶ್ ಶೇ. 82.22, ಅಂಕ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

