ಮೈಸೂರು

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಿದ್ಧವಾಗಿರಿ

Published On :

ಕ.ಪ್ರ.ವಾರ್ತೆ ಟಿ.ನರಸೀಪುರ ಸೆ. 1
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಪದವಿ ವಿದ್ಯಾರ್ಥಿಗಳು ಮಾನಸಿಕವಾಗಿ ಸಿದ್ಧರಿರಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ನಟರಾಜು ಹೇಳಿದರು.
ಪಟ್ಟಣದ ಗುರುಭವನದಲ್ಲಿ ಪದವಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪದವಿ ವ್ಯಾಸಂಗ ಮುಗಿದ ನಂತರ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಉದ್ಯೋಗವನ್ನು ಪಡೆದುಕೊಳ್ಳಬೇಕು. ಕಠಿಣ ಪರಿಶ್ರಮದ ಅಧ್ಯಯನದ ಮೂಲಕ ಜ್ಞಾನವನ್ನು ವೃದ್ಧಿಸಿಕೊಂಡು ಧೈರ್ಯದಿಂದಲೇ ಪರೀಕ್ಷೆ ಬರೆಯಬೇಕೆಂದು ಕಿವಿಮಾತು ಹೇಳಿದರು.
ಸ್ಪರ್ಧಾತ್ಮಕ ಪರೀಕ್ಷೆಯ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸುರೇಶ್, ಆನಂದಗೌಡ, ಎ.ವಿ. ಶಿವಯ್ಯ, ದೊರೆಸ್ವಾಮಿ, ಡಾ.ಇ. ರಾಜು ಹಾಗೂ ದೇವರಾಜು ಉಪನ್ಯಾಸ ನೀಡಿದರು. ವಿದ್ಯೋದಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಗೋಪಾಲ್, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಚೆನ್ನವಸವೇಗೌಡ, ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಕೆ.ಪಿ. ಪ್ರತಿಮಾ, ಕೆ. ನಾಗರತ್ನಮ್ಮ, ಎಂ. ಪಾರ್ವತಿ ಇದ್ದರು.

ಕ್ರೀಡಾಪಟುಗಳಿಗೆ ವೇದಿಕೆ ಕಲ್ಪಿಸಿ: ಸುರೇಶ್
ಕ.ಪ್ರ.ವಾರ್ತೆ ಕೆ.ಆರ್. ನಗರ ಸೆ. 1
ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಕ್ರಿಡಾಪಟುಗಳಿದ್ದು, ಅಂತಹವರನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಬೇಕಾಗಿದೆ ಎಂದು ರಾಷ್ಟ್ರೀಯ ವಾಲಿಬಾಲ್ ಪಟು ಬಿ.ಎಂ. ಸುರೇಶ್ ಹೇಳಿದರು. ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ದೈಹಿಕ ಸೌಂದರ್ಯ ಮತ್ತು ಭೌತಿಕ ಚುರುಕಿಗೆ ಕ್ರೀಡೆ ಹೆಚ್ಚು ಸಹಕಾರಿಯಾಗಿದೆ. ಸಂಕುಚಿತ ಮನೋಭಾವನೆ ಬಿಟ್ಟು ಪ್ರತಿಯೊಬ್ಬರು ಕ್ರೀಡೆಯಲ್ಲಿ ಪಾಲ್ಗೊಳ್ಳುವಂತೆ ಸಲಹೆ ನೀಡಿದರು.
ಮೈಸೂರಿನ ಜೆಸಿ ಕಾಲೇಜಿನ ದೈಹಿಕ ಶಿಕ್ಷಕ ಸುದರ್ಶನ್, ಕಾಲೇಜಿನ ಸಿಡಿಸಿ ಕಾರ್ಯದರ್ಶಿ ಪಾಂಡುರಂಗೇಗೌಡ, ಪ್ರಾಂಶುಪಾಲ ಕೆ.ಭಾರತಿ, ಉಪನ್ಯಾಸಕ ಡಾ.ಮಂಜುರಾಜು, ಸುನೀಲ್, ಚಂದ್ರಶೇಖರ್, ಶಾಂತಾಕುಮಾರಿ, ಸಬೀರಾಫಿರ್ದೋಸ್, ಶಾರದಮ್ಮ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.