ಮೈಸೂರು

'ಆಗಬೇಕಿದೆ ಭಾರತೀಯ ಸಂಸ್ಕೃತಿ ಪುನರುತ್ಥಾನ'

Published On :

ಮೈಸೂರು: ಪ್ರಸ್ತುತ ಭಾರತೀಯ ಸಂಸ್ಕೃತಿಯ ಪುನರುತ್ಥಾನ ಅವಶ್ಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಹೇಳಿದರು. ಕುಮಾರ್ ಪ್ರದರ್ಶಕ ಕಲೆಗಳ ಕೇಂದ್ರವು ಕುವೆಂಪುನಗರದ ವೀಣೆ ಶೇಷಣ್ಣ ಭವನದಲ್ಲಿ ಆಯೋಜಿಸಿರುವ ಐದು ದಿನಗಳ ರಾಷ್ಟ್ರೀಯ ನಾದ ನೃತ್ಯೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಸೋಮವಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ದೈಹಿಕ ಹಾಗೂ ಶಾರೀರಕವಾಗಿ ಸಮಾತೋಲನ ನೀಡಿ ಆರೋಗ್ಯ ವೃದ್ಧಿಸುವ ಭಾರತೀಯ ಕಲೆ, ನೃತ್ಯ ಹಾಗೂ ಯೋಗದ ಮಹತ್ವ ನಮಗಿಂತ ಹೆಚ್ಚಾಗಿ ವಿದೇಶಿಯರು ಅರಿತಿದ್ದಾರೆ. ಆದ್ದರಿಂದ ಭರತನಾಟ್ಯ ಸೇರಿದಂತೆ ಇಲ್ಲಿನ ಪ್ರಾಚೀನ ಕಲೆಗೆ ಪಾಶ್ಚಾತ್ಯರು ಮನ್ನಣೆ ನೀಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ದೇಶದಲ್ಲಿ ಸನಾತನ ಸಂಸ್ಕೃತಿ ಕ್ಷೀಣಿಸುತ್ತಿದೆ. ಕಲೆ ಮತ್ತು ಸಂಸ್ಕೃತಿ ಉಳಿಸುವಲ್ಲಿ ಅದರ ಪುನರುತ್ಥಾನ ಆಗಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.