ಮೈಸೂರು

ಆನರ್ಸ್ ಪದವಿ ಕೋರ್ಸ್ ಪುನರಾರಂಭ ಅವಶ್ಯ

Published On :

ಕ.ಪ್ರ.ವಾರ್ತೆ   ಮೈಸೂರು   ಸೆ. 2
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆನರ್ಸ್ ಪದವಿ ಕೋರ್ಸ್ಗಳನ್ನು ಪುನರಾರಂಭಿಸುವುದು ಆವಶ್ಯಕ ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ. ಎಸ್.ಎನ್. ಹೆಗ್ಡೆ ಹೇಳಿದರು.
ಯುವರಾಜ ಕಾಲೇಜು ಸಭಾಂಗಣದಲ್ಲಿ ಜ್ಞಾನವಾಹಿನಿ ಸಂಘದ ಆಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ 2013- 14 ನೇ ಸಾಲಿನ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ, ವಿಜ್ಞಾನ ವೇದಿಕೆ, ಎನ್ಸಿಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು.
ಈ ಹಿಂದೆ ಬಿಎ, ಬಿಎಸ್ಸಿ ಮತ್ತಿತರ ವಿಷಯದಲ್ಲಿ ಅನರ್ಸ್ ಪದವಿ ನೀಡುವ ಪದ್ಧತಿ ಇತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಆ ಪದ್ಧತಿ ಕೈಬಿಡಲಾಗಿದೆ. ಯುವರಾಜ ಕಾಲೇಜು ಸ್ವಾಯತ್ತ ಸಂಸ್ಥೆಯಾಗಿರುವುದರಿಂದ ಇಂತಹ ಕೋರ್ಸ್ ತೆಗೆಯಲು ಅವಕಾಶವಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪುನರಾರಂಭಿಸಬೇಕು ಎಂದರು.
ಶೈಕ್ಷಣಿಕ ಚಟುವಟಿಕೆ ಜತೆಗೆ ಇತರೆ ಪಠ್ಯೇತರ ಚಟುವಟಿಕೆಗಳು ಬಹುಮುಖ್ಯ. ವಿದ್ಯಾರ್ಥಿಗಳ ಮನೋವಿಕಾಸಕ್ಕೆ ಅಗತ್ಯವಾದ ಸೃಜನಾತ್ಮಕ ಹವ್ಯಾಸ ರೂಢಿಸಿಕೊಳ್ಳಬೇಕು. ಯೋಗ, ಸಂಗೀತ ಥೆರಪಿ, ನೃತ್ಯ ಮುಂತಾದವು ಆರೋಗ್ಯಕ್ಕೆ ಪೂರಕವಾಗಿರುವುದರಿಂದ ಇಂತಹ ವಿಷಯಗಳನ್ನು ಯುವಪೀಳಿಗೆಗೆ ಕಲಿಸಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಮೈಸೂರು ವಿವಿ ಕುಲಪತಿ ಹಾಗೂ ಯುವರಾಜ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರೂ ಆದ ಪ್ರೊ. ಕೆ.ಎಸ್. ರಂಗಪ್ಪ, ರಾಷ್ಟ್ರ ಮಟ್ಟದಲ್ಲಿ ಈ ಸಂಸ್ಥೆಯನ್ನು ಮಾದರಿ ವಿಜ್ಞಾನ ಕಾಲೇಜು ಮಾಡುವ ಆಶಯವಿದೆ. ಇಲ್ಲಿನ ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವುದು ಆದ್ಯತೆ ಕೆಲಸವಾಗಿದೆ. ಈ ದಿಸೆಯಲ್ಲಿ ಶಿಕ್ಷಕರನ್ನು ಪುನಶ್ಚೇತನಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.  
ಪ್ರಾಂಶುಪಾಲ ಪ್ರೊ. ಎಚ್. ನಂಜೇಗೌಡ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಡಾ. ಮಹಾಜಬಿನ್, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ. ಆರ್. ಗಣೇಶ್ ಇದ್ದರು.
ಜ್ಞಾನವಾಹಿನಿ ಸಂಚಾಲಕ ಪ್ರೊ. ವೈ.ಸಿ. ನಂಜುಂಡಯ್ಯ ಸ್ವಾಗತಿಸಿದರು. ಸಹ ಸಂಚಾಲಕಿ ಡಾ. ರೂಬಿ ಸೆಲೆಸ್ಟಿನ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.