ಮೈಸೂರು

ನಿವೃತ್ತ ನೌಕರರಿಗೆ ಸನ್ಮಾನ

Published On :

ಮೈಸೂರು: ಮೈಸೂರು ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಭಾನುವಾರ ಮೈಸೂರು ವಿವಿ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಏರ್ಪಡಿಸಿದ್ದ ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರು, ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು. ಹಣಕಾಸು ಅಧಿಕಾರಿ ಪ್ರೊ.ಎಂ. ಚಂದ್ರಕುಮಾರ್ ಇದ್ದರು.
ಸೋಮಾನಿ ಕಾಲೇಜು: ಮೈಸೂರು ವಿಶ್ವವಿದ್ಯಾಲಯ ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಆಡಳಿತಾತ್ಮಕ ಸಿಬ್ಬಂದಿಯವರ ಕ್ಷೇಮಾಭಿವೃದ್ಧಿ ಸಂಘದ ವಿತಿಯಿಂದ ಇಲ್ಲಿನ ಕುವೆಂಪುನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 29 ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.
ಸಂಘದ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ದಿ ಇನ್ಸ್ಟಿಟ್ಯೂಟ್ ಆಫ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಎಚ್.ಎನ್. ನಾಗರಾಜ್ ಅವರು, ನಿವೃತ್ತ ನೌಕರರನ್ನು ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಇನ್ಸ್ಟಿಟ್ಯೂಟ್ ಆಫ್ ಎಜುಕೇಷನ್ ಸಂಸ್ಥೆ ಟ್ರಸ್ಟಿ ಎಂ. ಪುಟ್ಟಸ್ವಾಮಿ, ಪ್ರಾಂಶುಪಾಲ ಪ್ರೊ. ಎಸ್.ಆರ್. ರಮೇಶ್ ಅವರು ಮುಖ್ಯ ಅತಿಥಿಯಾಗಿದ್ದರು. ಸಂಘದ ಉಪಾಧ್ಯಕ್ಷ ಎಸ್. ಶಿವಶಂಕರಪ್ಪ, ಪದಾಧಿಕಾರಿಗಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.