ಮೈಸೂರು

ಬಿಜೆಪಿಗೆ ನೇಮಕ

Published On :

ಮೈಸೂರು: ನಗರ ಬಿಜೆಪಿ ಕೃಷ್ಣರಾಜ ಕ್ಷೇತ್ರದ 5ನೇ ವಾರ್ಡಿನ ಪ್ರಧಾನ ಕಾರ್ಯದರ್ಶಿಯಾಗಿ ಡಿ.ಪಿ. ಸುರೇಶ್ ನೇಮಕವಾಗಿದ್ದಾರೆ.
14ರಂದು ಮೈಮಿಫೆಸ್ಟ್
ಮೈಸೂರು: ಮೈಸೂರು ಮಿರಾಕಲ್ಸ್ ಸೆ. 14ರಂದು ಮೈಮಿಫೆಸ್ಟ್- 2013 ಎಂಬ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ಹಾಗೂ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಿದೆ. ಅಂದು ಬೆಳಗ್ಗೆ 10ಕ್ಕೆ ನೃತ್ಯ ಸ್ಪರ್ಧೆ ಹಾಗೂ ಮಧ್ಯಾಹ್ನ 3ಕ್ಕೆ ಚಿತ್ರಕಲಾ ಸ್ಪರ್ಧೆ ನಡೆಸಲಾಗುವುದು. ನೃತ್ಯ ಸ್ಪರ್ಧೆಯೂ ಸಬ್ ಜೂನಿಯರ್, ಜೂನಿಯರ್, ಸೀನಿಯರ್ ವಿಭಾಗದಲ್ಲಿ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು 4 ವಿಭಾಗಗಳಲ್ಲಿ ನಡೆಸಲಾಗುವುದು. ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಮೈಸೂರು ಮಿರಾಕಲ್ಸ್ ಸಂಸ್ಥಾಪಕ ಮೋಹನ್ಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆ. 15ರ ಸಂಜೆ 5ಕ್ಕೆ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಮನರಂಜನಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಂಗೀತ ನಿರ್ದೇಶಕ ಅನೂಪ್ ಸಿಳೀನ್, ಶಾಸಕ ವಾಸು ಅತಿಥಿಗಳಾಗಿ ಭಾಗವಹಿಸುವರು ಎಂದರು. ಸದಸ್ಯರಾದ ವಿಶ್ವನಾಥ್, ಶಿವಪ್ರಸಾದ್ ಇದ್ದರು. ಹೆಚ್ಚಿನ ಮಾಹಿತಿಗಾಗಿ ಮೊ. 9482545949 ಸಂಪರ್ಕಿಸಬಹುದು.
ಇಂದು ಪ್ರತಿಭಟನೆ
ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ಅಖಿಲ ಕರ್ನಾಟಕ ನಾಯಕ ಜನಾಂಗದ ಹಿತರಕ್ಷಣಾ ವೇದಿಕೆಯು ಸೆ. 3 ರಂದು ಬೆಳಗ್ಗೆ 11.30 ಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ದ್ಯಾವಪ್ಪ ನಾಯಕ ಹಾಗೂ ಜಿಲ್ಲಾಧ್ಯಕ್ಷ ಶ್ರೀಧರ್ ಬೆಟ್ಟ ತಿಳಿಸಿದ್ದಾರೆ.
ಗೀತಾ ಪ್ರವಚನ
ಮೈಸೂರು: ವಿಜಯ ಫೌಂಡೇಷನ್ ವತಿಯಿಂದ ವಿವಿ ಮೊಹಲ್ಲಾದ ಪ್ರಸನ್ನ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಸೆ. 7 ರಿಂದ 10 ರವರೆಗೆ ಪ್ರತಿದಿನ ಸಂಜೆ 6.30 ಕ್ಕೆ ಭಕ್ತಿಯೋಗ ಎಂಬ ಶ್ರೀಮದ್ ಭಗವತ್ಗೀತಾ ಪ್ರವಚನವನ್ನು ಮುಮ್ತಾಜ್ ಅಲಿ ನಡೆಸಿಕೊಡುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.