ಸಾಮಾಜಿಕ ನ್ಯಾಯದ ಪರಿಕಲ್ಪನೆ ಅರಸರ ಕೊಡುಗೆ'
ಕ.ಪ್ರ.ವಾರ್ತೆ ಹುಣಸೂರು ಸೆ. 2
ಡಿ. ದೇವರಾಜ ಅರಸು ಅವರು ಶೋಷಿತ ಸಮುದಾಯದ ದನಿಯಾಗಿ ದಲಿತರಲ್ಲಿ ಸ್ವಾಭಿಮಾನದ ಬದುಕನ್ನು ಕಲ್ಪಿಸಿದರು ಹಾಗೂ ಜಾತಿ-ಜಾತಿಗಳ ನಡುವೆ ಸುಮಧುರ ಬಾಂಧವ್ಯ ತಂದು, ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಹೂರಣ ನೀಡಿದ ಅರಸು ಎಂದು ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಎಂ.ಜಿ.ಆರ್. ಅರಸ್ ಬಣ್ಣಿಸಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ದಸಂಸ ವತಿಯಿಂದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸರ 98ನೇ ಜಯಂತಿಯ ಅಂಗವಾಗಿ ಆಯೋಜಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿ, ಅರಸರ ಕಾಲದಲ್ಲಿ ಚಾಲ್ತಿಯಲ್ಲಿದ್ದ ಹಣದ, ವಂಶ ಪಾರಂಪರ್ಯ ಗುತ್ತಿಗೆ ರಾಜಕಾರಣವನ್ನು ತಮ್ಮದೆ ಆದ ಶೈಲಿಯಲ್ಲಿ ಕಾನೂನಾತ್ಮಕವಾಗಿಯೆ ಹೊಡೆದೊಡಿಸಿದ ನಿಷ್ಠುರ ರಾಜಕಾರಣಿ ಅವರಾಗಿದ್ದರು ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿವೃತ್ತ ನಿರ್ದೇಶಕ ಡಾ.ಡಿ. ತಿಮ್ಮಯ್ಯ ಮಾತನಾಡಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ದಲಿತ ಮುಖಂಡರಾದ ಡಿ. ಕುಮಾರ್, ಸಿಪಿಐ ಪ್ರಧಾನ ಕಾರ್ಯದರ್ಶಿ ವಿ. ಬಸವರಾಜ್ ಕಲ್ಕುಣಿಕೆ, ದಸಂಸ ಜಿಲ್ಲಾ ಸಂಚಾಲಕ ನಿಂಗರಾಜ ಮಲ್ಲಾಡಿ, ದಲಿತ ಮುಖಂಡರಾದ ಡಿ. ಕುಮಾರ್, ವರದರಾಜ್, ಅಂಬಿಶ್ರೀಧರ್, ಬಾಲು, ಕಿರಿಜಾಜಿ ಗಜೇಂದ್ರ, ದೇವೇಂದ್ರ, ಅರಸರ ಅನುಯಾಯಿಗಳಾದ ಉದಯ ಕಲ್ಲಹಳ್ಳಿ, ಪ್ರಾಣೇಶ್ ಶೆಟ್ಟರು, ಬನ್ನಾರಯ್ಯ, ನಂಜುಂಡಯ್ಯ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

