ಸೃಜನಶೀಲತೆಗೆ ಪ್ರತಿಭೆ ಸಹಕಾರಿ: ಶಂಕರ್
ಕ.ಪ್ರ.ವಾರ್ತೆ ಮೈಸೂರು ಸೆ. 2
ಸೃಜನಶೀಲ ಚಟುವಟಿಕೆಗಳು ಪ್ರತಿಭಾ ವಿಕಾಸಕ್ಕೆ ಸಹಕಾರಿ ಎಂದು ಚಲನಚಿತ್ರ ನಟ ಶಂಕರ್ ಅಶ್ವತ್ಥ್ ಹೇಳಿದರು.
ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರತಿಭಾನ್ವೇಷಣೆ 2013- 14ನೇ ಸಾಲಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದುದು. ಅದನ್ನು ಸದಪಯೋಗ ಪಡಿಸಿಕೊಂಡಾಗ ಹೆಚ್ಚಿನ ಸಾಧನೆ ಮಾಡಲು ಸಾಧ್ಯ. ಸಮಯವನ್ನು ವ್ಯರ್ಥ ಮಾಡದೆ, ಶಿಕ್ಷಣದಲ್ಲಿ ಹೆಚ್ಚು ಆಸಕ್ತಿ ಬೆಳೆಸಿಕೊಂಡು ಗುರುಗಳ ಮಾರ್ಗದರ್ಶನದಲ್ಲಿ ಮುನ್ನಡೆದಾಗ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದರು.
ಪ್ರತಿಯೊಬ್ಬರಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ. ಆದರೆ, ಅದನ್ನು ಜಾಗೃತಗೊಳಿಸಿ ಹೊರಗೆ ತಿಳಿಸುವಲ್ಲಿ ಪರಿಶ್ರಮ ಅವಶ್ಯಕ ಎಂದರು.
ಮೈಸೂರು ವಿವಿ ಕುಲಸಚಿವ ಪ್ರೊ. ಸಿ. ಬಸವರಾಜು ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲೆ ಪ್ರೊ. ಸ.ನ. ಗಾಯತ್ರಿ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಆಡಳಿತಾಧಿಕಾರಿ ಡಾ. ಬಿ. ನಾಗರಾಜಮೂರ್ತಿ, ಪಠ್ಯೇತರ ಚಟುವಟಿಕೆಗಳ ಸಮಿತಿ ಸಂಚಾಲಕಿ ಡಾ. ಸಿ. ಸುಮಂಗಲಾ ಇದ್ದರು. ನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

