ಮೈಸೂರು

ಸ್ವಾತಂತ್ರ್ಯ ಯೋಧರ ಆರೋಗ್ಯ ತಪಾಸಣೆ

Published On :

ಕ.ಪ್ರ.ವಾರ್ತೆ   ಮೈಸೂರು   ಸೆ. 2
ಇಲ್ಲಿನ ಸುಬ್ಬರಾಯನಕರೆ ಮೈದಾನದಲ್ಲಿರುವ ಹೋರಾಟಗಾರರ ಭವನದಲ್ಲಿ ಸ್ವಾತಂತ್ರ್ಯ ಯೋಧರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಭಾನುವಾರ ನಡೆಯಿತು.
ಮೈಸೂರು ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘದ ವತಿಯಿಂದ ಏರ್ಪಡಿಸಿದ್ದ ಈ ಕಾರ್ಯಕ್ರಮವನ್ನು ಮಾಜಿ ಮೇಯರ್ ಅನಂತ ಉದ್ಘಾಟಿಸಿದರು.
ಸಮಾಜವಾದಿ ಪಕ್ಷದ ಮುಖಂಡ ಬಿ.ಕರುಣಾಕರನ್ ಮುಖ್ಯ ಅತಿಥಿಯಾಗಿದ್ದರು. ಸಂಘದ ಅಧ್ಯಕ್ಷ ಡಿ.ಎಸ್. ಜಗದೀಶ್, ಕಾರ್ಯಾಧ್ಯಕ್ಷ ಡಾ.ಎಂ.ಜೆ. ಕೃಷ್ಣಮೂರ್ತಿ, ಉಪಾಧ್ಯಕ್ಷ ಜಯಸಿಂಹ, ಕಾರ್ಯದರ್ಶಿ ಎಂ.ಆರ್. ರಾಮಶೇಷು ಅವರು ಇದ್ದರು.
ಜೆಎಸ್ಎಸ್ ಆಯುರ್ವೇದ ಆಸ್ಪತ್ರೆಯ ಅಧೀಕ್ಷಕ ಡಾ.ಗುರುಬಸವರಾಜು ಹಾಗೂ ಡಾ.ಚಂದ್ರಶೇಖರ್ ಅವರು ಸ್ವಾತಂತ್ರ್ಯ ಹೋರಾಟಗಾರರನ್ನು ಹಾಗೂ ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿದರು.
ಸುಮಾರು 40 ಮಂದಿ ಶಿಬಿರದಲ್ಲಿ ಭಾಗವಹಿಸಿದ್ದರು. ಅಗತ್ಯ ಔಷಧಗಳನ್ನು ಉಚಿತವಾಗಿ ಹಂಚಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.