ಮೈಸೂರು

ಸಹಕಾರ ಸಂಘಕ್ಕೆ ಜೆಡಿಎಸ್ ಬೆಂಬಲಿತರ ಆಯ್ಕೆ

Published On :

ಕ.ಪ್ರ.ವಾರ್ತೆ   ರಾವಂದೂರು   ಸೆ. 2
ತಾಲೂಕಿನ ಪ್ರತಿಷ್ಠಿತ ಸಹಕಾರ ಸಂಘಗಳಲ್ಲೊಂದಾದ ರಾವಂದೂರಿನ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಈ ಕೆಳಕಂಡವರು ಆಯ್ಕೆಯಾಗಿದ್ದಾರೆ.
ಸಾಲಗಾರರ ಕ್ಷೇತ್ರದ 5 ಮಂದಿ ನಿರ್ದೇಶಕ ಸ್ಥಾನಕ್ಕೆ 10 ಮಂದಿ ಸ್ಪರ್ಧಿಸಿದ್ದು, ಎಚ್.ಡಿ. ವಿಜಯ್, ಆರ್.ಎಸ್. ಸುಮನ್ಕುಮಾರ್, ರಾಮಚಂದ್ರ, ಷೋಯಬ್ಖಾನ್, ಎಚ್.ಆರ್. ಕುಮಾರ್ ಆಯ್ಕೆಯಾಗಿದ್ದಾರೆ.
ಪ. ಜಾತಿ ಕ್ಷೇತ್ರದಿಂದ ರವಿ, ಹಿಂದುಳಿದ ಎ ವರ್ಗದಿಂದ ಎ.ಟಿ. ಜಗದೀಶ್, ವೀಣಾ, ಗಾಯಿತ್ರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಾಲಗಾರರಲ್ಲದ ಕ್ಷೇತ್ರದಿಂದ ಬಿ.ಟಿ. ಮರೀಗೌಡ ಅವಿರೋಧವಾಗಿ ಈಗಾಗಲೇ ಆಯ್ಕೆಯಾಗಿದ್ದರು. ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ಅಧಿಕಾರಿ ಸುರೇಶ್ ಕಾರ್ಯನಿರ್ವಹಿಸಿದರು. ಕಾರ್ಯನಿರ್ವಾಹಕ ಅಧಿಕಾರಿ ಆರ್.ಎ. ವಿಜೇಂದ್ರ, ಶಿವರಾಂ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.