ಮಾನಸಿಕ ಅಸ್ವಸ್ಥ ಯುವತಿ ಆತ್ಮಹತ್ಯೆ
ಮೈಸೂರು: ಮಾನಸಿಕ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಜಯನಗರ ಬಳಿಯ ಚಿಕ್ಕಹರದನಹಳ್ಳಿ ನಿವಾಸಿ ಜವರಯ್ಯ ಎಂಬವರ ಪುತ್ರಿ ಪುಷ್ಪಲತಾ (24) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ವಿವಾಹವಾಗಿರಲಿಲ್ಲ. ಮಾನಸಿಕ ಅಸ್ವಸ್ಥೆಯಾಗಿದ್ದ ಪುಷ್ಪಲತಾ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಶೋಕಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರಿ ಬಿದ್ದು ವಿದ್ಯಾರ್ಥಿ ಸಾವು
ಕ.ಪ್ರ.ವಾರ್ತೆ ಹುಣಸೂರು ಸೆ. 3
ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬ ಇಲ್ಲಿನ ಪೊಲೀಸ್ ಠಾಣೆ ಬಳಿ ಜಾರಿ ಬಿದ್ದ ಪರಿಣಾಮ, ತೀವ್ರವಾಗಿ ಪೆಟ್ಟು ಬಿದ್ದು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ಜರುಗಿದೆ.
ರೋಟರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿ, ಮಾರಿಗುಡಿ ಬೀದಿಯ ನಿಂಗರಾಜು ಅವರ ಏಕೈಕ ಪುತ್ರ ಮಂಜುನಾಥ್ (11) ಮೃತಪಟ್ಟ ವಿದ್ಯಾರ್ಥಿ. ತಾಲೂಕಿನಲ್ಲಿ ಸೋಮವಾರ ಬಿದ್ದ ಮಳೆಯಿಂದಾಗಿ ರಸ್ತೆಯಲ್ಲಿ ಜಾರಿ ಬಿದ್ದ ಈತನನ್ನು ಕೂಡಲೆ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವಾಗಲೆ ಮಾರ್ಗಮಧ್ಯೆ ಮೃತಪಟ್ಟಿರುತ್ತಾನೆ. ಶಾಲೆಯಲ್ಲಿ ಮೃತ ವಿದ್ಯಾರ್ಥಿಗೆ ಸಂತಾಪ ಸೂಚಿಸಿ, ಶಾಲಾ ಶಿಕ್ಷಕರು ಹಾಗೂ ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು ಮತ್ತು ವಿದ್ಯಾರ್ಥಿಗಳು ಅಂತಿಮ ದರ್ಶನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

