ಮೈಸೂರು

ಮೇಯರ್ ಪಟ್ಟಕ್ಕಾಗಿ ಪೈಪೋಟಿ

Published On :

ಕ.ಪ್ರ.ವಾರ್ತೆ   ಮೈಸೂರು   ಸೆ. 3-
ಮೈಸೂರು ಮಹಾನಗರಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯು ಗುರುವಾರ (ಸೆ.5) ನಡೆಯಲಿದ್ದು, ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕಾಗಿ ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿದೆ.
ಕಾಂಗ್ರೆಸ್ ಪಕ್ಷಕ್ಕೆ ಪಾಲಿಕೆಯಲ್ಲಿ ಅಧಿಕಾರ ತಪ್ಪಿಸುವ ನಿಟ್ಟಿನಲ್ಲಿ ಜೆಡಿಎಸ್- ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿವೆ. ಆದರೆ, ಮೇಯರ್ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿರುವುದರಿಂದ ಎರಡು ಪಕ್ಷದವರು ಮೇಯರ್ ಹುದ್ದೆಗಾಗಿ ಪಟ್ಟು ಹಿಡಿದಿವೆ. ಹೀಗಾಗಿ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಬಿಜೆಪಿ- ಜೆಡಿಎಸ್ ಮುಖಂಡರು ಮಾತುಕತೆಯಲ್ಲಿ ಮುಂದುವರಿಸಿದ್ದಾರೆ.

ಕೈ ಕಸರತ್ತು: ಈ ನಡುವೆ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಹಾಗೂ ಮುಖಂಡರು ಮಂಗಳವಾರ ಖಾಸಗಿ ಹೊಟೇಲ್ವೊಂದರಲ್ಲಿ ಸಭೆ ಸೇರಿ ಮೇಯರ್, ಉಪ ಮೇಯರ್ ಚುನಾವಣೆ ಸಂಬಂಧ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್, ಶಾಸಕರಾದ ಎಂ.ಕೆ. ಸೋಮಶೇಖರ್, ವಾಸು, ತನ್ವೀರ್ ಸೇಠ್, ನಗರಾಧ್ಯಕ್ಷ ಸಿ. ದಾಸೇಗೌಡ, ಮಾಜಿ ಮೇಯರ್ಗಳು ಮತ್ತು ನಗರಪಾಲಿಕೆ ಸದಸ್ಯರು ಸಭೆಯಲ್ಲಿ ಪಾಲ್ಗೊಂಡು, ಚುನಾವಣೆ ಸ್ಪರ್ಧೆ ಬಗ್ಗೆ ಚರ್ಚಿಸಿದ್ದಾರೆ.
ಮೇಯರ್ ಸ್ಥಾನಕ್ಕೆ ಮಂಜುಳಾ ಮಾನಸ, ರತ್ನಮ್ಮ, ಉಮಾಮಣಿ, ತಸ್ಲೀಂ ಇನ್ನಿತರ ಹೆಸರು ಕೇಳಿ ಬಂದಿದೆ. ಉಪ ಮೇಯರ್ ಸ್ಥಾನಕ್ಕೆ ಭಾಗ್ಯವತಿ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ. ಆಕಾಂಕ್ಷಿಗಳ ಪಟ್ಟಿಯನ್ನು ಕೆಪಿಸಿಸಿ ಅಧ್ಯಕ್ಷರ ಮುಂದೆ ಬುಧವಾರ ತೆಗೆದುಕೊಂಡು ಹೋಗಲು ಕಾಂಗ್ರೆಸ್ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಬಿಜೆಪಿ- ಜೆಡಿಎಸ್ ಪಕ್ಷದವರು ಒಮ್ಮತ ನಿರ್ಧಾರಕ್ಕೆ ಬಾರದಿದ್ದರೆ ಅದರ ಲಾಭ ಪಡೆಯಲು ಕಾಂಗ್ರೆಸ್ ಪಕ್ಷದವರು ಹವಣಿಸುತ್ತಿದ್ದಾರೆ. ಕಾಂಗ್ರೆಸ್ಗೆ ಪಾಲಿಕೆಯಲ್ಲಿ ಅಧಿಕಾರ ತಪ್ಪಿಸುವ ಸಲುವಾಗಿ ಬಿಜೆಪಿ- ಜೆಡಿಎಸ್ನವರು ಪ್ರತಿತಂತ್ರ ರೂಪಿಸುತ್ತಿದ್ದಾರೆ. ಅಂತಿಮವಾಗಿ ಮೇಯರ್, ಉಪಮೇಯರ್ ಎಂಬುದು ಗುರುವಾರ ನಿರ್ಧಾರವಾಗಲಿದೆ.

-  ಬಿ. ಶೇಖರ್ ಗೋಪಿನಾಥಂ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.