ಧರ್ಮಾಪುರ ವಸತಿ ಶಾಲೆಗೆ ಜಿಪಂ ಸದಸ್ಯೆ ಭೇಟಿ
ಕ.ಪ್ರ.ವಾರ್ತೆ ಹುಣಸೂರು ಸೆ. 4
ಸರ್ಕಾರ ನೀಡುವ ಅನುದಾನ ಸದ್ಬಳಕೆ ಮಾಡಿಕೊಳ್ಳದೆ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಪರಿಸರ, ಆರೋಗ್ಯ ಕಾಪಾಡದ ಅಧಿಕಾರಿಗಳು ಮತ್ತು ಶಿಕ್ಷಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಜಿಪಂ ಸದಸ್ಯೆ ಡಾ. ಪುಷ್ಪಾವತಿ ಅಮರನಾಥ್ ಎಚ್ಚರಿಕೆ ನೀಡಿದರು.
ತಾಲೂಕಿನ ಧರ್ಮಾಪುರ ಮೊರಾರ್ಜಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸ್ಥಳಿಯ ಜನಪ್ರತಿನಿಧಿಗಳು ಮತ್ತು ವೈದ್ಯರ ತಂಡದೊಂದಿಗೆ ಭೇಟಿ ನೀಡಿ, ಶಾಲೆಯಲ್ಲಿ ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಬಗ್ಗೆ ಮತ್ತು ಇಲ್ಲಿನ ಅವ್ಯವಸ್ಥೆಯ ವಿಚಾರವಾಗಿ ಬಂದ ದೂರಿನ ಮೇರೆಗೆ ಪರಿಶೀಲನೆ ನಡೆಸಿದಾಗ ಕಳೆದೆರಡು ದಿನಗಳ ಹಿಂದೆ ಕುಡಿಯುವ ನೀರಿನಿಂದಾಗಿ ಅಸ್ಪಸ್ಥರಾಗಿದ್ದು, ಈ ಸಂಬಂಧ 57 ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು, 7 ಮಕ್ಕಳು ಮಾತ್ರ ಅಸ್ಪಸ್ಥರಾಗಿದ್ದಾರೆ. ಉಳಿದ 50 ಮಕ್ಕಳು ಆರೋಗ್ಯವಾಗಿದ್ದಾರೆಂದು ವೈದ್ಯರು ದೃಢೀಕರಿಸಿದ್ದಾರೆ. ಈ ವಿಚಾರವಾಗಿ ಶಿಕ್ಷಕರ ನಿರ್ಲಕ್ಷ್ಯತೆಯಿಂದ ಆಗಿದೆ ಎಂದು ಪೋಷಕರು ದೂರಿದ್ದಾರೆ.
ಈ ಸಂಬಂಧ ಮೊರಾರ್ಜಿ ಮತ್ತು ಕಿತ್ತೂರು ರಾಣಿ ವಸತಿ ಶಾಲೆಗಳ ಪ್ರಾಂಶುಪಾಲರು ಮಾತನಾಡಿ, ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಟ್ಟರೆ ಇನ್ಯಾವ ಸಮಸ್ಯೆಗಳಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸುರಕ್ಷಿತವಾಗಿ ಉತ್ತಮ ಆರೋಗ್ಯ ಕಾಪಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಜಿಪಂ ಸದಸ್ಯೆ ಡಾ. ಪುಷ್ಪಾವತಿ ಅಮರನಾಥ್ ಮಾತನಾಡಿ, ಶಾಲೆಯಲ್ಲಿ ಮಕ್ಕಳು ಅಸ್ಪಸ್ಥರಾಗಿರುವ ಬಗ್ಗೆ ತಮಗೆ ತುಂಬಾ ಬೇಜಾರಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ತನಿಖೆ ಮಾಡಲು ಸೂಚಿಸಿದ್ದೇನೆ ಹಾಗೂ ಇನ್ನು ಮುಂದೆ ಶಾಲೆಯಲ್ಲಿ ಇಂತಹ ಪರಿಸ್ಥಿತಿ ಉದ್ಬವಿಸದಂತೆ ಎಚ್ಚರ ವಹಿಸಬೇಕು.
ಸಮಸ್ಯೆಗಳಿದ್ದರೆ ಚರ್ಚಿಸಿ, ತಾವು ಸರ್ಕಾರದ ಅನುದಾನ ಹಾಗೂ ತಮ್ಮ ಶಾಸಕರ ಕಡೆಯಿಂದ ವೈಯಕ್ತಿಕವಾಗಿ ಬಗೆಹರಿಸಲು ಪ್ರಯತ್ನ ಮಾಡುವೆ ಹಾಗೂ ವಸತಿ ಶಾಲೆಗಳಲ್ಲಿನ ಮೂಲ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಲು ಶಾಸಕರಿಗೆ ಮನವಿ ಮಾಡುತ್ತೇನೆ ಮತ್ತು ಶಾಲೆಯಲ್ಲಿ ಶುಚಿ, ರುಚಿಯಾದ ಊಟ, ಉತ್ತಮ ಪಾಠ ಮಾಡುವಂತೆ ಶಿಕ್ಷಕರಿಗೆ ಸೂಚಿಸಿದರು.
ಶಾಸಕ ಎಚ್.ಪಿ. ಮಂಜುನಾಥ್ ಅಧ್ಯಕ್ಷತೆಯಲ್ಲಿ ಎರಡು ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿ ಮತ್ತು ಅಧಿಕಾರಿಗಳ ಸಭೆ ನಡೆಸಿ ಸಾಮರಸ್ಯದ ಕೊರತೆ ನೀಗಿಸಿ, ಮಕ್ಕಳ ಭವಿಷ್ಯಕ್ಕೆ ಮುಳ್ಳಾಗದಂತೆ ಎಚ್ಚರ ವಹಿಸಲು ಶೀಘ್ರವೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ವೈದ್ಯರಾದ ಧರ್ಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಮುಕುಂದ, ರತ್ನಪುರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ನವೀನ್, ಮುಖಂಡರಾದ ಧರ್ಮಾಪುರ ರಮೇಶ್, ಅಜ್ಗಾರಪಾಷಾ, ಪಾಪೇಗೌಡ, ಜೆ. ಶೇಖರ್, ಕಲ್ಕುಣಿಕೆ ಶ್ರೀನಿವಾಸ್, ಗವಿನಾಯ್ಕ, ಮಲ್ಲೇಶ್ಗೌಡ, ಎನ್. ಅಶೋಕ್, ಕಸಾಪ ಅಧ್ಯಕ್ಷ ವಿ.ಪಿ. ಸಾಯಿನಾಥ್ ಹಾಗೂ ಪ್ರಾಂಶುಪಾಲರಾದ ರಾಮಶೆಟ್ಟಿ, ದೇವರಾಜು ಮತ್ತು ಶಿಕ್ಷಕರು, ಸಿಬ್ಬಂದಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

