ಜೆಡಿಎಸ್ ಕಾರ್ಯಕರ್ತರ ಸಂಭ್ರಮಕ್ಕೆ ಬಿಜೆಪಿ ಸಾಥ್
ಮೈಸೂರು: ಮೇಯರ್ ಆಗಿ ಎನ್.ಎಂ. ರಾಜೇಶ್ವರಿ, ಉಪ ಮೇಯರ್ ಆಗಿ ವಿ. ಶೈಲೇಂದ್ರ ಅವರು ಆಯ್ಕೆಯಾಗುತ್ತಿದ್ದಂತೆ ಪಾಲಿಕೆ ಹೊರಗೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು. ಈ ಸಂಭ್ರಮಕ್ಕೆ ಮೈತ್ರಿ ಪಕ್ಷವಾದ ಬಿಜೆಪಿ ಕಾರ್ಯಕರ್ತರು ಸಹ ಸಾಥ್ ನೀಡಿದರು. ರಾಜೇಶ್ವರಿ ಮತ್ತು ಶೈಲೇಂದ್ರ ಪರವಾಗಿ ಜೆಡಿಎಸ್ ಕಾರ್ಯಕರ್ತರು ಘೋಷಣೆ ಕೂಗಿದರು. ಪಟಾಕಿ ಸಿಡಿಸಿದರು, ಸಿಹಿ ಹಂಚಿ ಖುಷಿ ಪಟ್ಟರು. ಇದೇ ಮೊದಲ ಬಾರಿಗೆ ಎಸ್ಡಿಪಿಐನಿಂದ ಆಯ್ಕೆಯಾಗಿರುವ ಎಸ್. ಸ್ವಾಮಿ, ರೇಷ್ಮಾ ಜಬೀನ್ ಮತ್ತು ಸಿ. ಮಹದೇವ ಅವರನ್ನು ಮಿಲಾದ್ ಬಾಗ್ನಿಂದ ಮೆರವಣಿಗೆಯಲ್ಲಿ ಆಗಮಿಸಿದರು. ಇವರಿಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಾಥ್ ನೀಡಿದರು.
ಭದ್ರತೆ: ಮೇಯರ್, ಉಪ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಕೆ.ಆರ್. ಉಪ ವಿಭಾಗದ ಎಸಿಪಿ ಎ.ಎನ್. ಪ್ರಕಾಶ್ಗೌಡ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ಸಿ.ಡಿ. ಜಗದೀಶ್, ಸೂರ್ಯನಾರಾಯಣರಾವ್, ಮರಿಸಿದ್ದಶೆಟ್ಟಿ, ಎಂ.ಎ. ಹರೀಶ್ಕುಮಾರ್, ಎನ್.ಎಸ್. ಚಂದ್ರಶೇಖರ್, ಕೆ.ಎನ್. ಯಶವಂತ್ಕುಮಾರ್ ಮತ್ತು ಸಿಬ್ಬಂದಿ ಭದ್ರತೆ ಕೈಗೊಂಡಿದ್ದರು. ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಅವರು ನಗರಪಾಲಿಕೆ ಪ್ರೇಕ್ಷಕರ ಗ್ಯಾಲರಿ ಕುಳಿತು ಕೆಲ ಕಾಲ ಮೇಯರ್, ಉಪ ಮೇಯರ್ ಚುನಾವಣೆ ಪ್ರಕ್ರಿಯೆ ವೀಕ್ಷಿಸಿದರು. ಇವರೊಂದಿಗೆ ಜೆಡಿಎಸ್ ನಗರಾಧ್ಯಕ್ಷ ರಾಜಣ್ಣ, ಬಿಜೆಪಿ ಮುಖಂಡ ಯಶಸ್ವಿ ಸೋಮಶೇಖರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

