ಮೈಸೂರು

ರಾಷ್ಟ್ರದ ಪ್ರಗತಿಗೆ ಶಿಕ್ಷಕರು ಶ್ರಮಿಸಬೇಕು'

Published On :

ಕ.ಪ್ರ.ವಾರ್ತೆ  ಮೈಸೂರು  ಸೆ. 5
ಶಿಕ್ಷಕರು ರಾಷ್ಟ್ರದ ಪ್ರಗತಿಗೆ ಶ್ರಮಿಸಬೇಕು ಎಂದು ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಪಿ. ವೆಂಕಟರಾಮಯ್ಯ ಹೇಳಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಸ್ವಾಸ್ಥ್ಯ ಸಮಾಜವು ನಿರ್ಮಾಣವಾಗಬೇಕಾದರೆ ಶಿಕ್ಷಕರ ಪಾತ್ರ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಶಿಕ್ಷಕರು ತಮ್ಮ ವೃತ್ತಿಯಲ್ಲಿ ಮತ್ತು ಜೀವನದಲ್ಲಿ ಆದರ್ಶಯುತವಾದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಈ ರೀತಿ ಆದರ್ಶಯುತವಾದ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡ ಶಿಕ್ಷಕ ಸಮುದಾಯದ ಮಾರ್ಗದರ್ಶನದಲ್ಲಿ ರಾಷ್ಟ್ರವು ಮುನ್ನಡೆಯುತ್ತದೆ. ಒಂದು ರಾಷ್ಟ್ರದ ಅಭಿವೃದ್ಧಿ ಆರ್ಥಿಕ ಸಂಪತ್ತಿಗಿಂತ ಮಿಗಿಲಾಗಿ ಬೌದ್ಧಿಕ ಸಂಪತ್ತನ್ನು ಅವಲಂಬಿಸಿರುತ್ತದೆ. ಆದ್ದರಿಂದ ಬೌದ್ಧಿಕ ಸಂಪತ್ತನ್ನು ಹೊಂದಿರುವ ಶಿಕ್ಷಕರು ಈ ರಾಷ್ಟ್ರದ ಪ್ರಗತಿಗೆ ಶ್ರಮಿಸಬೇಕು ಎಂದರು.
ರಾಜ್ಯದಲ್ಲಿ ಮುಕ್ತ ವಿವಿಯು ಶಿಕ್ಷಣ ವಂಚಿತರಿಗೆ ಉನ್ನತ ಶಿಕ್ಷಣ ನೀಡುವ ಗುರಿಯನ್ನು ಹೊಂದಿರುವುದರಿಂದ ಸಮಾಜದ ಪ್ರಗತಿಯಲ್ಲಿ ವಿವಿಯ ಶಿಕ್ಷಕರ ಜವಾಬ್ದಾರಿ ತುಂಬ ಪ್ರಮುಖವಾದದ್ದು ಎಂದು ತಿಳಿಸಿದರು.
ಕುಲಪತಿ ಪ್ರೊ.ಎಂ.ಜಿ. ಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಜೆ. ಸುರೇಶ್, ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಪ್ರೊ.ವಿಕ್ರಂ ರಾಜೇ ಅರಸ್ ಮತ್ತು  ಹಣಕಾಸು ಅಧಿಕಾರಿ ಪ್ರೊ.ಎಲ್. ರಾಜಶೇಖರಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.