ಮೈಸೂರು

ವಿವಿಧ ಇಲಾಖೆಗಳ ಅಧಿಕಾರಿಗಳ ವರ್ಗಾವಣೆ

Published On :

ಕ.ಪ್ರ.ವಾರ್ತೆ  ಟಿ.ನರಸೀಪುರ  ಸೆ. 5
ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡಲಾಗಿದೆ.
ತಹಸೀಲ್ದಾರ್ ಹಾಗೂ ತಾಪಂ ಇಒ ಸೇರಿದಂತೆ ಪ್ರಮುಖ ಇಲಾಖೆಗಳ ಮುಖ್ಯಸ್ಥ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅದರಂತೆ ತಹಸೀಲ್ದಾರ್ ಎಚ್.ಎಸ್. ಅರುಣಪ್ರಭ ಅವರನ್ನು ಬೀದರ್ ಜಿಲ್ಲೆಗೆ ವರ್ಗಾಹಿಸಿ, ಬೆಂಗಳೂರು ವಿಧಾನ ಸೌಧದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಜೇಂದ್ರ ಅವರನ್ನು ನಿಯೋಜಿಸಲಾಗಿದೆ. ತಾಪಂ ಇಒ ಸಿ. ವೆಂಕಟೇಶ್ ಅವರ ಸ್ಥಳಕ್ಕೆ ಚಾ.ನಗರ ತಾಪಂ ಇಒ ಜೆ. ಕೃಷ್ಣ ಅವರನ್ನು ಕೂರಿಸಲಾಗಿದೆ. ಅಬಕಾರಿ ನಿರೀಕ್ಷಕಿ ಜಿ. ಪದ್ಮಾವತಿ ಅವರನ್ನು ಮೈಸೂರು ರೇಂಜರ್ ಸಂಖ್ಯೆ 1ಕ್ಕೆ ವರ್ಗಾವಣೆ ಮಾಡಿ, ಹುಣಸೂರು ಅಬಕಾರಿ ನಿರೀಕ್ಷಕ ಉಮಾಶಂಕರ್ ಅವರನ್ನು ನರಸೀಪುರಕ್ಕೆ ನಿಯೋಜಿಸಲಾಗಿದೆ. ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಬಾಲ ವಿಕಾಶ ಯೋಜನಾಧಿಕಾರಿ ರಾಜಪ್ಪ ಅವರನ್ನು ವರ್ಗಾಹಿಸಿ, ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜು ಅವರನ್ನು ನಿಯೋಜಿಸಲಾಗಿದೆ. ಜಿಪಂ ತಾಂತ್ರಿಕ ಉಪ ವಿಭಾಗದ ಎಇಇ ಎಸ್.ಆರ್. ಪುರುಷೋತ್ತಮ ಅವರನ್ನು ಮೈಸೂರು ಪಾಲಿಕೆಗೆ ವರ್ಗಾಯಿಸಿ, ಚಾ.ನಗರ ಉಪ ವಿಭಾಗದ ಲಕ್ಷ್ಮಣ್‌ರಾವ್ ಅವರನ್ನು ನಿಯೋಜನೆಗೊಳಿಸಲಾಗಿದೆ. ಗಾಗಲೆ ಲೋಕೋಪಯೋಗಿ ಎಇಇ ಡಿ. ದಯಾನಂದ ವರ್ಗಾವಣೆಗೊಂಡಿದ್ದು, ಅವರಿಂದ ತೆರವಾದ ಸ್ಥಳಕ್ಕೆ ನಟರಾಜು ಅಧಿಕಾರ ವಹಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.