ಅತ್ಯಾಚಾರ ಪ್ರಕರಣ: ಪೊಲೀಸರಿಗೆ 'ಅತಿಥಿ'ಆದ ಉಪನ್ಯಾಸಕ
ಕೆ.ಆರ್. ನಗರ: ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ನಾಟಕವಾಡಿ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಅತಿಥಿ ಉಪನ್ಯಾಸಕ ನಂದೀಶ ಶುಕ್ರವಾರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಇಲ್ಲಿನ ಪುರಸಭೆಯ ಮಾಜಿ ಅಧ್ಯಕ್ಷ ತಮ್ಮನಾಯಕ ಅವರ ಪುತ್ರ ನಂದೀಶ ನನ್ನನ್ನು ಪ್ರೀತಿಸುವ ನಾಟಕವಾಡಿ ಕಳೆದ ನಾಲ್ಕು ವರ್ಷಗಳಿಂದ ಅತ್ಯಾಚಾರವೆಸಗಿ, ಈಗ ಬೇರೆ ಮದುವೆಯಾಗಲು ಪ್ರಯತ್ನಿಸುತ್ತಿದ್ದಾನೆ ಎಂದು ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿಯ ಗೌರಮ್ಮ ಆ.16 ರಂದು ಕೆ.ಆರ್. ನಗರದ ಮಿನಿ ವಿಧಾನಸೌದದ ಮುಂದೆ ಮತ್ತು ಸೆ.4 ರಂದು ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ್ದರು. ಈ ಸಂಬಂಧ ಕೆ.ಆರ್. ನಗರ ಮತ್ತು ಮೈಸೂರು ಪೊಲೀಸ್ ಠಾಣೆಗೆ ದೂರು ನೀಡಿ ಆತನನ್ನು ಬಂಧಿಸಿ ನ್ಯಾಯ ಕೊಡಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದರು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ನಾಪತ್ತೆಯಾಗಿದ್ದ ನಂದೀಶನನ್ನು ಬಂಧಿಸಲು ಬಲೆ ಬೀಸಿದ್ದರಲ್ಲದೆ, ಈ ಸಂಬಂಧ ಆತನ ಸಹೋದರ ಮತ್ತು ಕೆಲವು ಸ್ನೇಹಿತರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. ಬಂಧನದ ಭೀತಿಯಿಂದ ಶುಕ್ರವಾರ ಬೆಳಗ್ಗೆ ಶರಣಾಗಿರುವ ಟಿ. ನಂದೀಶ ಮಾತನಾಡಿ, ಗೌರಮ್ಮ ಆರೋಪಿಸಿರುವಂತೆ ನಾನು ಯಾವುದೆ ತಪ್ಪು ಮಾಡಿಲ್ಲ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

