ಮೈಸೂರು

'ಮೊಬೈಲ್ ಬಿಡಿ ಶಿಕ್ಷಣದತ್ತ ಗಮನಕೊಡಿ'

Published On :

ಕ.ಪ್ರ. ವಾರ್ತೆ, ಕೆ.ಆರ್. ನಗರ, ಸೆ.6
ವಿದ್ಯಾರ್ಥಿಗಳು ಮೊಬ್ಯೆಲ್ ಬಳಕೆ ಕಡಿಮೆ ಮಾಡಿ, ಶಿಕ್ಷಣದತ್ತ ಹೆಚ್ಚು ಗಮನ ಹರಿಸಬೇಕು ಎಂದು ಶಾಸಕ ಸಾ.ರಾ. ಮಹೇಶ್ ಕಿವಿಮಾತು ಹೇಳಿದರು.
ಇಲ್ಲಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈಗ ಮೊದಲ ಹಂತದಲ್ಲಿ ಎರಡು ಕೋಟಿ ಬಿಡುಗಡೆಯಾಗಿದ್ದು, 8 ಕೊಠಡಿಗಳನ್ನು ನಿರ್ಮಾಣ ಮಾಡಿ ನಂತರ ಹಂತ ಹಂತವಾಗಿ ಅವಶ್ಯಕತೆಗನುಗುಣವಾಗಿ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.
ಪ್ರಾಥಮಿಕ ಹಂತದಿಂದ ಪದವಿ ಶಿಕ್ಷಣದವರೆಗೆ ಪಟ್ಟದಲ್ಲಿಯೇ ಅನುಕೂಲತೆ ಇದ್ದು, ಎಲ್ಲರೂ ಇದರ ಪ್ರಯೋಜನ ಪಡೆಯಿರಿ ಎಂದರಲ್ಲದೆ, ನನ್ನ ಅಧಿಕಾರ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸರ್ಕಾರದ ಮೇಲೆ ಒತ್ತಡ ಹೇರಿ ಮತ್ತಷ್ಟು ಕೊಠಡಿಗಳ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿಸುವುದಾಗಿ ಭರವಸೆ ನೀಡಿದರು.
ತಾಲೂಕಿಗೆ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅವಶ್ಯಕತೆ ಇರುವುದನ್ನು ಮನಗಂಡು ಕಾಲೇಜು ಆರಂಭಿಸಲಾಯಿತು. 5 ವರ್ಷದ ಅವಧಿಯಲ್ಲಿ 800 ವಿದ್ಯಾರ್ಥಿಗಳು ಕಲಿಯುತ್ತಿದ್ದು, ಗ್ರಾಮಾಂತರ ಪ್ರದೇಶದ ಹೆಣ್ಣು ಮಕ್ಕಳಿಗೆ ಇದರಿಂದ ಅನುಕೂಲವಾಗುತ್ತಿದ್ದು, ಎಲ್ಲರೂ ಅನುಕೂಲ ಪಡೆಯುವಂತೆ ಕರೆ ನೀಡಿದರು.
ಜಿಪಂ ಹಂಗಾಮಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್, ತಾಲೂಕು ಜೆಡಿಸ್ ಅಧ್ಯಕ್ಷ ಚಂದ್ರಶೇಖರ್, ಪ್ರಾಂಶುಪಾಲ ಕೆ.ಆರ್. ದೀಕ್ಷಿತ್, ಪುರಸಭಾ ಸದಸ್ಯರಾದ ಗೀತಾಮಹೇಶ್, ಉಮೇಶ್, ಎನ್.ಶಿವಕುಮಾರ್, ಎಚ್.ಸಿ. ರಾಜು, ಮಾಜಿ ಸದಸ್ಯ ಕೆ.ಎಸ್. ರೇವಣ್ಣ, ಸಿಡಿಸಿ ಸದಸ್ಯರಾದ ಕೋಮಲ ಶಿವನಂಜಪ್ಪ, ಪುಷ್ಪಶಿವಪ್ರಸಾದ್, ಮೋಹನ್ಕುಮಾರಿ, ಕೆ.ಟಿ.ರಮೇಶ್, ಜೆಡಿಎಸ್ ವಕ್ತಾರ ಕೆ.ಎಲ್. ರಮೇಶ್, ಹೊಸಹಳ್ಳಿ ವೆಂಕಟೇಶ್, ಗ್ರಾಪಂ ಸದಸ್ಯ ಸಿ.ಜಿ. ಮಧುಸೂದನ, ಹೊಸೂರು ಸಹಕಾರ ಬ್ಯಾಂಕ್ ಮಾಜಿ ಅಧ್ಯಕ್ಷ ಎಚ್.ಆರ್. ಮದುಚಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.