ಕೆ.ಆರ್ ಕ್ಷೇತ್ರದಲ್ಲಿ ಪಡಿತರ ಚೀಟಿ ವಿತರಣೆ
ಕ.ಪ್ರ. ವಾರ್ತೆ ಮೈಸೂರು ಸೆ. 7
ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ಶಾಸಕ ಎಂ.ಕೆ. ಸೋಮಶೇಖರ್ ಹೇಳಿದರು.
ಕುವೆಂಪುನಗರದ ಚಿಕ್ಕಮ್ಮ ನಿಕೇತನದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೆ.ಆರ್. ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಿ ಮಾತನಾಡಿ, ನಗರದಲ್ಲಿ ಪ್ರಸ್ತುತ ಒಟ್ಟು 1,52,842 ಪಡಿತರ ಚೀಟಿಗಳು ಇವೆ. ಈ ಪೈಕಿ ಅಂತ್ಯೋದಯ 2,449, ಬಿಪಿಎಲ್, 1,92,079 ಮತ್ತು ಎಪಿಎಲ್ 41,114 ಕಾರ್ಡ್ ಇದೆ. ಈ ಪೈಕಿ ಕೆ.ಆರ್. ಕ್ಷೇತ್ರದಲ್ಲಿ ಅಂತ್ಯೋದಯ 687, ಬಿಪಿಎಲ್ 46,000 ಮತ್ತು ಎಪಿಎಲ್ 28,226 ಸೇರಿ ಒಟ್ಟು 74,913 ಕಾರ್ಡ್ ಇದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ಒಂದು ರು.ಗೆ ಒಂದು ಕೆಜಿ ಅಕ್ಕಿ, ಸರ್ಕಾರಿ ಶಾಲೆ ಮಕ್ಕಳಿಗೆ ಕ್ಷೀರಭಾಗ್ಯ, ಪ.ಜಾತಿ, ಪ.ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪಡೆದ ಸಾಲ ಮನ್ನಾ ಮಾಡಿದರು. ಈ ಎಲ್ಲಾ ಯೋಜನೆಗಳನ್ನು ಜನಪ್ರತಿನಿಧಿಗಳು ಸಾರ್ವಜನಿಕರಿಗೆ ತಿಳಿಸಬೇಕು. ಅಧಿಕಾರಿಗಳು ಯೋಜನೆಯನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಹೇಳಿದರು.
ನಿಜವಾದ ಬಡವರಿಗೆ ಅನ್ನಭಾಗ್ಯ ಯೋಜನೆ ದೊರಕಬೇಕು. ನ್ಯಾಯಬೆಲೆ ಅಂಗಡಿಯವರು ಸರಿಯಾದ ಪ್ರಮಾಣದಲ್ಲಿ ಪಡಿತರ ವಿತರಿಸಬೇಕು. ಬಡವರು ಪಡಿತರ ಚೀಟಿ ಪಡೆಯಲು ಅಲೆಯುವುದನ್ನು ತಪ್ಪಿಸಬೇಕು. ನಿಜವಾದ ಫಲಾನುಭವಿಗಳನ್ನು ಗುರುತಿಸಿ ಬಿಪಿಎಲ್ ಕಾರ್ಡ್ ನೀಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎಂ.ಕೆ. ಸೋಮಶೇಖರ್ ಅವರು ಹೆಣ್ಣು ಮಗುವೊಂದಕ್ಕೆ ಅಕ್ಷತ (ಅ- ಎಂದರೆ ಅನ್ನಭಾಗ್ಯ, ಕ್ಷ- ಎಂದರೆ ಕ್ಷೀರಭಾಗ್ಯ) ಎಂದು ನಾಮಕರಣ ಮಾಡಿದರು.
ಪಾಲಿಕೆ ಸದಸ್ಯರಾದ ಮಂಜುಳಾ ಮಾನಸ, ಸುನಿಲ್ ಜೆ.ಎಸ್. ಜಗದೀಶ್, ಸುನಿಲ್, ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಡಾ.ಕಾ. ರಾಮೇಶ್ವರಪ್ಪ ಮತ್ತು ಸಹಾಯಕ ನಿರ್ದೇಶಕ ದೇವಯ್ಯ, ಪರಿವೀಕ್ಷಕರಾದ ಎಚ್.ಕೆ. ರಾಮು, ಮಲ್ಲಿಕಾರ್ಜುನ್, ರಾಘವೇಂದ್ರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

