ಮೈಸೂರು

'ಲೇಖಕನ ಬಂಧನ ಪ್ರಜಾಪ್ರಭುತ್ವ ವಿರೋಧಿ'

Published On :

ಮೈಸೂರು: ಗಣೇಶನ ಕುರಿತು ಪುಸ್ತಕ ಬರೆದ ಲೇಖಕನ ಬಂಧಿಸಿದ್ದು ಪ್ರಜಾಪ್ರಭುತ್ವದ ವಿರೋಧಿತನ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದರು. ಜೆಎಸ್‌ಎಸ್ ಮಹಿಳಾ ಕಾಲೇಜು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಹೊರಳು ದಾರಿಯಲ್ಲಿ ಕನ್ನಡ ಸಾಹಿತ್ಯ ಹುಡುಕಾಟದ ಹೊಸ ನೆಲೆಗಳು ಎಂಬ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪದಲ್ಲಿ ಅವರು ಮಾತನಾಡಿದರು. ಯಾವುದೇ ಸಾಹಿತ್ಯಿಕ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ಲೇಖಕನ ಬಂಧಿಸುವುದು ಪ್ರಜಾಸತ್ತಾತ್ಮಕ ವಿರೋಧಿ ಕೆಲಸ. ಅಂದಿನ ಬಿಜೆಪಿ ಸರ್ಕಾರ ಇಂತಹ ಯಾವುದೇ ವಿಷಯಕ್ಕೆ ಯಾರನ್ನು ಬಂಧಿಸಿದ ಉದಾಹರಣೆಯಿಲ್ಲ. ಆದರೆ  ಯೋಗೇಶ್ ಮಾಸ್ಟರ್ ಬಂಧನ ಪ್ರಜಾಪ್ರಭುತ್ವದ ವಿರೋಧಿತನ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.